ಪ್ರಮುಖ ಸುದ್ದಿ

ಕೊರೋನಾ ಎರಡನೇ ಅಲೆ ನಿಯಂತ್ರಿಸಲು ಪಂಜಾಬ್ ರಾಜ್ಯದಲ್ಲಿ ಡಿ.1ರಿಂದ ರಾತ್ರಿ ಕರ್ಫ್ಯೂ ಜಾರಿ

ದೇಶ( ಚಂಡಿಗಢ)ನ.26:- ಪಂಜಾಬ್ ರಾಜ್ಯದಲ್ಲಿ ಕೊರೋನಾ ವೈರಸ್ ಎರಡನೇ ಅಲೆ ನಿಯಂತ್ರಿಸುವುದಕ್ಕಾಗಿ ಡಿಸೆಂಬರ್ 1ರಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಕೊರೋನಾ ವೈರಸ್ ಎರಡನೇ ಅಲೆ ಆರಂಭವಾಗಿದ್ದು ಕೊರೋನಾ ವೈರಸ್ ಹರಡುವಿಕೆಯನ್ನು ತಡೆಯುವುದಕ್ಕಾಗಿ ಡಿಸೆಂಬರ್ 1ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ ಎಂದು ಅಮರಿಂದರ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಸೆಂಬರ್ 1 ರಿಂದ ರಾತ್ರಿ 9.30ಕ್ಕೆ ಪಂಜಾಬ್‌ನ ಎಲ್ಲಾ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ವಿವಾಹದ ಸ್ಥಳಗಳನ್ನು ಬಂದ್ ಆಗಲಿವೆ. ಡಿಸೆಂಬರ್ 15ರಂದು ಕಫ್ಯೂ ಮುಂದುವರೆಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.

ಕರ್ಫ್ಯೂ ಜೊತೆಗೆ ಹೊಸ ನಿರ್ಬಂಧಗಳನ್ನು ಘೋಷಿಸಿರುವ ಪಂಜಾಬ್ ಸಿಎಂ, ಮಾಸ್ಕ್ ಧರಿಸದಿರುವವರಿಗೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದವರಿಗೆ ವಿಧಿಸಲಾಗುತ್ತಿದ್ದ ದಂಡದ ಮೊತ್ತವನ್ನು 500 ರೂ.ಗಳಿಂದ 1,000 ರೂ.ಗೆ ಏರಿಸಲಾಗಿದೆ ಎಂದಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: