ಮೈಸೂರು

ಬೈಕ್ ಗೆ ಹಿಂದಿನಿಂದ ಗುದ್ದಿದ ಖಾಸಗಿ ಬಸ್ : ಸವಾರ ಸಾವು

ಮೈಸೂರು,ನ.26:- ದ್ವಿಚಕ್ರವಾಹನವೊಂದಕ್ಕೆ ಹಿಂದಿನಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಸರ್ಕಾರಿ ಅತಿಥಿಗೃಹ ಮುಂಭಾಗದ ಸಿಗ್ನಲ್ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಮೈಸೂರಿನ ಹಳೆ ಕೆಸರೆ ನಿವಾಸಿ ಆನಂದ್(28) ಎಂದು ಗುರುತಿಸಲಾಗಿದೆ.
ಆನಂದ್ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಬೈಕ್ ನಲ್ಲಿ ಕೆಎಸ್ ಆರ್ಟಿಸಿ ಗ್ರಾಮಾಂತರ ಬಸ್ ನಿಲ್ದಾಣ ಕಡೆಯಿಂದ ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಖಾಸಗಿ ಬಸ್ ಬೈಕ್ ಗೆ ಡಿಕ್ಕಿಯಾಗಿದ್ದು, ಈ ವೇಳೆ ಕೆಳಗೆ ಬಿದ್ದ ಆನಂದ್ ಅವರ ತಲೆ ಮೇಲೆ ಬಸ್ ನ ಹಿಂಬದಿ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ದೇವರಾಜ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: