ಪ್ರಮುಖ ಸುದ್ದಿ

ನೋಯ್ಡಾದಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ರಸ್ತೆ ನಿರ್ಮಾಣ : ರಾಜ್ಯದಲ್ಲಿ ಇದೇ ಮೊದಲು

ದೇಶ(ನವದೆಹಲಿ)ನ.27:- ಪ್ಲಾಸ್ಟಿಕ್ ತ್ಯಾಜ್ಯದಿಂದ ನೋಯ್ಡಾದಲ್ಲಿ ರಸ್ತೆ ನಿರ್ಮಾಣ ಕಾರ್ಯ ಆರಂಭವಾಗಿದೆ.
ಪ್ಲಾಸ್ಟಿಕ್ ತ್ಯಾಜ್ಯದಿಂದ ರಸ್ತೆ ನಿರ್ಮಿಸಿದ ರಾಜ್ಯದ ಮೊದಲ ನಗರ ಎಂಬ ಹೆಗ್ಗಳಿಕೆಗೆ ನೋಯ್ಡಾ ಪಾತ್ರವಾಗಿದೆ.

ನೋಯ್ಡಾ ಪ್ರಾಧಿಕಾರದ ಸಿಇಒ ರಿತು ಮಹೇಶ್ವರಿ ಈ ಯೋಜನೆಯನ್ನು ಹಸಿರುನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಮೊದಲ ಹಂತದಲ್ಲಿ 500 ಮೀಟರ್ ಉದ್ದದ ರಸ್ತೆ ನಿರ್ಮಿಸಲಾಗುತ್ತಿದೆ, ಇದರಲ್ಲಿ 35 ಮೆಟ್ರಿಕ್ ಟನ್ ಪ್ಲಾಸ್ಟಿಕ್ ತ್ಯಾಜ್ಯವನ್ನು ಬಳಸಲಾಗಿದೆ. ಈ ಕೆಲಸವನ್ನು ನೋಯ್ಡಾ ಪ್ರಾಧಿಕಾರವು ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್‌ ನ ಸಹಯೋಗದೊಂದಿಗೆ ಪ್ರಾರಂಭಿಸಿದೆ. ಈ ರಸ್ತೆಯನ್ನು ನೋಯ್ಡಾದ ಸೆಕ್ಟರ್ 129 ರಲ್ಲಿ ನಿರ್ಮಿಸಲಾಗಿದೆ. ಇದರಲ್ಲಿ ಪ್ರಾಧಿಕಾರದ ಸಿಇಒ ರಿತು ಮಹೇಶ್ವರಿ ಸ್ವತಃ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಗೆಯೇ ಜನರಲ್ ಮ್ಯಾನೇಜರ್ ರಾಜೀವ್ ತ್ಯಾಗಿ, ಸರ್ಕಲ್ 9 ಕ್ಷೇತ್ರ ಅಧಿಕಾರಿ ವಿಜಯ್ ರಾವಲ್ ಉಪಸ್ಥಿತರಿದ್ದರು. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: