ಮೈಸೂರು

ನ.29 : ತರಾಸು ಜನ್ಮ ಶತಮಾನೋತ್ಸವ ಸಮಾರಂಭ

ಮೈಸೂರು,ನ.27:- ತರಾಸು ಜನ್ಮಶತಮಾನೋತ್ಸವ ಸಮಿತಿ ವತಿಯಿಂದ ಕನ್ನಡ ಸಾರಸ್ವತ ಲೋಕದಲ್ಲಿ ಧೃವತಾರೆಯಂತೆ ಮೆರೆದ ಖ್ಯಾತ ಕಾದಂಬರಿಕಾರ ತರಾಸು ಜನ್ಮ ಶತಮಾನೋತ್ಸವ ಸಮಾರಂಭವನ್ನು ನ.29ರಂದು ಮೈಸೂರಿನ ಇನ್ಸಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮೈಸುರು ಪತ್ರಕರ್ತರ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ತರಾಸು ಜನ್ಮಶತಮಾನೋತ್ಸವ ಸಮಿತಿಯ ಅಧ್ಯಕ್ಷ ಡಾ.ವೈ,ಡಿ.ರಾಜಣ್ಣ ಮಾತನಾಡಿ ಅಂದು ಬೆಳಿಗ್ಗೆಯಿಂದ ಸಂಜೆಯವರೆಗೂ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು 10.30ಕ್ಕೆ ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದರು. ಮಾಜಿ ಶಾಸಕ ವಾಸು ಅಧ್ಯಕ್ಷತೆ ವಹಿಸಲಿದ್ದು ಅತಿಥಿಗಳಾಗಿ ಶಾಸಕರಾದ ಎಸ್.ಎ.ರಾಮದಾಸ್, ಎಲ್,ನಾಗೇಂದ್ರ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮ ಉದ್ಘಾಟನೆಯ ಬಳಿಕ ಎರಡುಗೋಷ್ಠಿಗಳು ನಡೆಯಲಿವೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಗೌರವಾಧ್ಯಕ್ಷ ಡಿ.ಟಿ.,ಪ್ರಕಾಶ್, ಕಾರ್ಯಾಧ್ಯಕ್ಷರಾದ ಕೆ.ರಘುರಾಂ ವಾಜಪೇಯಿ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: