ಕರ್ನಾಟಕದೇಶಪ್ರಮುಖ ಸುದ್ದಿ

ಅದ್ಧೂರಿಯಾಗಿ ನೆರವೇರಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಮದುವೆ

ಗೋವಾ/ಬೆಳಗಾವಿ,ನ.27- ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳಕರ್ ಅವರ ವಿವಾಹ ಗೋವಾದ ಲೀಲಾ ಪ್ಯಾಲೆಸ್ ನಲ್ಲಿ ಇಂದು ಅದ್ಧೂರಿಯಾಗಿ ನೆರವೇರಿತು.

ಲಕ್ಷ್ಮಿ ಹೆಬ್ಬಾಳಕರ್ ಪುತ್ರ ಮೃಣಾಲ್ ಹೆಬ್ಬಾಳಕರ್ ಅವರ ಮದುವೆ ಡಾ.ಹಿತಾ ಅವರ ಜೊತೆ ನೆರವೇರಿದೆ. ಡಾ.ಹಿತಾ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಸಹೋದರ ಬಿ.ಕೆ. ಶಿವಕುಮಾರ್‌ ಪುತ್ರಿ.

ಮದುವೆ ಸಮಾರಂಭದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ‌, ಮಾಜಿ ಸಚಿವ ಯು.ಟಿ.ಖಾದರ್, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಜಿ, ವಿನಯ್ ಗುರುಜಿ, ರಿಜ್ವಾನ್ ಅರ್ಷದ್, ಡಾ.ಅಂಜಲಿ ನಿಂಬಾಳ್ಕರ್, ಮುಖಂಡ ಅಶೋಕ ಪಟ್ಟಣ, ಜಿಲ್ಲಾ ‍ಪಂಚಾಯಿತಿ ಉಪಾಧ್ಯಕ್ಷ ಅರುಣ ಕಟಾಂಬಳೆ ಸೇರಿದಂತೆ ಅನೇಕ ಗಣ್ಯರು ಮದುವೆಯಲ್ಲಿ ಭಾಗವಹಿಸಿ ನವ ದಂಪತಿಗೆ ಶುಭಕೋರಿದರು.

ಗೋವಾದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇದ್ದಾರೆ. ಆದರೆ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲಿಲ್ಲ. (ಎಂ.ಎನ್)

 

 

Leave a Reply

comments

Related Articles

error: