ಮೈಸೂರು

ಶಾಸಕರುಗಳು-ಜಿಲ್ಲಾಧಿಕಾರಿ ಜಟಾಪಟಿ : ಜನಪ್ರತಿನಿಧಿಗಳ ಸಭೆ ನಡೆಸಿ ಸಮಸ್ಯೆ ಬಗಹರಿಸಿಕೊಳ್ಳಲಿ ಶಾಸಕ ನಾಗೇಂದ್ರ ಸಲಹೆ

ಮೈಸೂರು,ನ.28:- ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಶಾಸಕರಾದ ಹೆಚ್.ಪಿ ಮಂಜುನಾಥ್, ಸಾ.ರಾ ಮಹೇಶ್ ನಡುವಿನ ಜಟಾಪಟಿ ಸಂಬಂಧ ಶಾಸಕ ಎಲ್ ನಾಗೇಂದ್ರ ಕೆಲವು ಸಲಹೆ ನೀಡಿದರು.
ಮೈಸೂರಿನಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಕೆಲವು ಸಂದರ್ಭಗಳಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳು ಸಹಜ. ಸಮನ್ವಯದ ಕೊರತೆ ಇದ್ದರೆ ಮಾತುಕತೆ ಮುಖಾಂತರ ಸಮಸ್ಯೆ ಬಗೆಹರಿಸಿಕೊಳ್ಳಲಿ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ. ಕೆಲವು ಸಂದರ್ಭಗಳಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳು ಸಹಜ. ಆಡಳಿತಾತ್ಮಕ ವಿಚಾರದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡುವ ಅಗತ್ಯತೆ ಇದೆ. ಕೋವಿಡ್ ಸಂದರ್ಭದಲ್ಲಿ ಪಿಪಿಇ ಕಿಟ್ ಧರಿಸಿ ರೋಗಿಗಳನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಸಮನ್ವಯದ ಕೊರತೆ ಇದ್ದರೆ ಮಾತುಕತೆ ಮುಖಾಂತರ ಸಮಸ್ಯೆ ಬಗೆಹರಿಸಿಕೊಳ್ಳಲಿ ಎಂದರು.

ಸಾ ರಾ ಮಹೇಶ್ ಕೂಡ ಸಚಿವಾರಾಗಿದ್ದಂತವರು. ಜಿಲ್ಲಾಧಿಕಾರಿಗಳೂ ಕೂಡ ಜನಪ್ರತಿನಿಧಿಗಳೊಂದಿಗೆ ಸಮನ್ವಯತೆಯಿಂದ ವರ್ತಿಸುವುದು ಅವಶ್ಯಕ. ನಮ್ಮಕ್ಷೇತ್ರದ ವಿಚಾರದಲ್ಲಿ ಜಿಲ್ಲಾಧಿಕಾರಿ ಎಲ್ಲಾ ಸಹಕಾರ ನೀಡುತ್ತಿದ್ದಾರೆ. ಜನಪ್ರತಿನಿಧಿಗಳ ಸಭೆ ನಡೆಸಿ ಸಮಸ್ಯೆ ಬಗಹರಿಸಿಕೊಳ್ಳಲಿ ಎಂದು ಶಾಸಕ ನಾಗೇಂದ್ರ ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: