ಮೈಸೂರು

ಚಾಮರಾಜ ಜೋಡಿ ರಸ್ತೆಯಲ್ಲಿ ಅಸ್ವಸ್ಥರಾಗಿದ್ದ ಮಹಿಳೆ : ಆಸ್ಪತ್ರೆಗೆ ಸೇರಿಸಿದ ಮಾಜಿ ಶಾಸಕರು

ಮೈಸೂರು,ನ.30:- ಚಾಮರಾಜ ಜೋಡಿ ರಸ್ತೆಯಲ್ಲಿ ಅಸ್ವಸ್ಥರಾಗಿದ್ದ ಮಹಿಳೆಯೋರ್ವರನ್ನು ಕಾಂಗ್ರೆಸ್ ಮುಖಂಡ ಎಂ.ಕೆ.ಸೋಮಶೇಖರ್ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.
ಮಹಿಳೆಯ ಸ್ಥಿತಿ ಗಂಭೀರವಾಗಿರುವುದನ್ನು ಗಮನಿಸಿದ ಅವರು ರೈಲ್ವೆ ಉದ್ಯೋಗಿ ಭೈರಪ್ಪ ಹಾಗೂ ಎನ್ ಐಇ ಕಾಲೇಜಿನ ಉಪನ್ಯಾಸಕ ವಿನೋದ್ ಅವರ ನೆರವಿನಿಂದ ಆ್ಯಂಬುಲೆನ್ಸ್ ಮೂಲಕ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: