ಕರ್ನಾಟಕಪ್ರಮುಖ ಸುದ್ದಿ

ಕರಾವಳಿ ಜನತೆಯ ಆತಂಕಕ್ಕೆ ಕಾರಣವಾದ `ಪ್ರವಾದಿಗೆ ಕೋಪ ಬಂದರೆ ಒಂದೇ ಶಿಕ್ಷೆ, ಅದು ತಲೆ ದೇಹದಿಂದ ಬೇರ್ಪಡುವುದು’ ಎಂಬ ಗೋಡೆಬರಹ

ಮಂಗಳೂರು,ನ.30-ಕೆಲವು ದಿನಗಳ ಹಿಂದೆಯಷ್ಟೇ ನಗರದ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ಗೋಡೆಯ ಮೇಲೆ ದೇಶದ್ರೋಹಿ ಬರಹವೊಂದನ್ನು ಬರೆದಿದ್ದರು. ಈಗ ಅದೇ ರೀತಿಯ ಬರಹ ನಗರದ ಕೋರ್ಟ್ ರಸ್ತೆಯ ಗೋಡೆಯೊಂದರ ಮೇಲೆ ಬರೆಯಲಾಗಿದೆ.

‘Gustuk e Rasool ek hi saza sar tan say juda’ ಎನ್ನುವ ಗೋಡೆ ಬರಹ ಕರಾವಳಿಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಆ ಗೋಡೆ ಬರಹದ ಅರ್ಥ `ಪ್ರವಾದಿಗೆ ಕೋಪ ಬಂದರೆ ಒಂದೇ ಶಿಕ್ಷೆ, ಅದು ತಲೆ ದೇಹದಿಂದ ಬೇರ್ಪಡುವುದು’ ಎಂಬುದಾಗಿದೆ.

ಈ ಗೋಡೆ ಬರಹದ ಬಗ್ಗೆ ಮಂಗಳೂರು ಶಾಸಕ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಗೋಡೆ ಬರಹವನ್ನು ನಾನು ಖಂಡಿಸುತ್ತೇನೆ. ಇದನ್ನ ಯಾರಿಗೇ ಆಗಲಿ ಸಹಿಸಲು ಸಾಧ್ಯವಿಲ್ಲ. ಇದನ್ನು ಪತ್ತೆಹಚ್ಚುವುದು ಬಿಜೆಪಿ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ಜವಾಬ್ದಾರಿ. ಇವರಿಗೆ ಬೆಂಬಲವಾಗಿರುವರನ್ನ ಪತ್ತೆ ಹಚ್ಚಿ ಷಡ್ಯಂತ್ರ ಬಯಲು ಮಾಡಬೇಕಿದೆ”ಎಂದು ಖಾದರ್ ಹೇಳಿದ್ದಾರೆ.

ಈ ಘಟನೆಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯಾದರ್ಶಿ ಸಿ.ಟಿ.ರವಿ ವಿಷಾದ ವ್ಯಕ್ತಪಡಿಸಿ, ಭಯೋತ್ಪಾದಕರನ್ನು ಸ್ಮಶಾನಕ್ಕೆ ಕಳುಹಿಸುವ ಕೆಲಸವನ್ನು ನಮ್ಮ ಸೈನಿಕರು ಮತ್ತು ಪೊಲೀಸರು ಸಮರ್ಥವಾಗಿ ನಿಭಾಯಿಸುತ್ತಾರೆ ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ, ಕದ್ರಿ ಠಾಣಾ ವ್ಯಾಪ್ತಿಯ ಬಿಜೈ ರಸ್ತೆಯಲ್ಲಿ ‘ಲಷ್ಕರ್ ಎ ತೋಯ್ಬಾ ಮತ್ತು ತಾಲಿಬಾನ್‌ಗಳಿಗೆ ಸಂಘಿಗಳನ್ನು ಯಾವ ರೀತಿ ನೋಡಿಕೊಳ್ಳಬೇಕು ಎಂಬುದು ತಿಳಿದಿದೆ. ನಮ್ಮನ್ನು ವಿಧ್ವಂಸಕ ಕೃತ್ಯ ನಡೆಸಲು ಉತ್ತೇಜಿಸಲು ಬರಬೇಡಿ, ಲಷ್ಕರ್ ಜಿಂದಾಬಾದ್’ ಎನ್ನುವ ಗೋಡೆಬರಹ, ಭಾರೀ ವಿವಾದವನ್ನು ಹುಟ್ಟುಹಾಕಿತ್ತು.

ಹೋಂಡಾ ಆಕ್ಟೀವಾದಲ್ಲಿ ಬಂದ ಇಬ್ಬರು ಕಿಡಿಗೇಡಿಗಳು (ಮೊದಲ ಘಟನೆ) ಈ ಕೃತ್ಯವನ್ನು ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಮಂಗಳೂರು ಪೊಲೀಸರು, ದೇಶದ್ರೋಹಿಗಳ ಜಾಡು ಹಿಡಿದು ಕಾರ್ಯಾಚರಣೆ ಈಗಾಗಲೇ ಆರಂಭಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: