ಮೈಸೂರು

ಡಿಸೆಂಬರ್ 3ರಂದು ಕನಕದಾಸರ ಜಯಂತಿ

ಮೈಸೂರು.ಡಿ.1:- ಜಿಲ್ಲಾಡಳಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಡಿಸೆಂಬರ್ 3ರಂದು ಬೆಳಗ್ಗೆ 11.30ಕ್ಕೆ ಕಲಾಮಂದಿರದ ಅವರಣದಲ್ಲಿರುವ ಮನೆಯಂಗಳದಲ್ಲಿ ಕನಕದಾಸ ಜಯಂತಿಯನ್ನು ಆಚರಿಸಲಾಗುತ್ತದೆ.
ಕೋವಿಡ್-19ಹಿನ್ನೆಲೆಯಲ್ಲಿ ಕನಕದಾಸರ ಜಯಂತಿಯನ್ನು ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: