ಮೈಸೂರು

ಪಾಲಿಕೆ ಸದಸ್ಯ ನಟರಾಜ್ ವಿರುದ್ಧ ಪ್ರತಿಭಟನೆ : ಕ್ರಮ ಕೈಗೊಳ್ಳುವ ಭರವಸೆ ನೀಡಿದ ಮೇಯರ್

ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.57 ರ ಸದಸ್ಯ ನಟರಾಜ್ ಎಂಬವರು ಅಭಿವೃದ್ಧಿ ಅಧಿಕಾರಿ ನಿಂಗಾ ಶೆಟ್ಟಿ ಎಂಬವರಿಗೆ  ಕಾಮಗಾರಿ ವಿಷಯಕ್ಕೆ ಸಂಬಂಧಿಸಿದಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ವಿರೋಧಿಸಿ ಪಾಲಿಕೆಯ ಅಧಿಕಾರಿಗಳು ಪಾಲಿಕೆಯ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನಡೆಸಿದ ಅಧಿಕಾರಿಗಳು ಪಾಲಿಕೆ ಸದಸ್ಯ ನಟರಾಜ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಿದರು. ಈ ಸಂದರ್ಭ ಸ್ಥಳಕ್ಕಾಗಮಿಸಿದ ಮೇಯರ್ ಎಂ.ಜೆ.ರವಿಕುಮಾರ್  ತಪ್ಪು ಮಾಡಿದ್ದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಮೇಯರ್ ಭರವಸೆಯ ಬಳಿಕ  ಅಧಿಕಾರಿಗಳು ಪ್ರತಿಭಟನೆ ಕೈಬಿಟ್ಟಿದ್ದಾರೆ. ಪ್ರತಿಭಟನೆಯಲ್ಲಿ 250ಕ್ಕೂ ಅಧಿಕ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪಟ್ಟಣ ಮತ್ತು ನಗರ ಯೋಜನೆಯ ಸ್ಥಾಯಿ ಸಮಿತಿಯ ಅಧ್ಯಕ್ಷ ನಂದೀಶ್ ಪ್ರೀತಂ ಸೇರಿದಂತೆ ಐವರ ತಂಡ ಸಭೆ ನಡೆಸುತ್ತಿದೆ. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: