
ಕರ್ನಾಟಕಪ್ರಮುಖ ಸುದ್ದಿ
`ಕೋವಾಕ್ಸಿನ್’ 3ನೇ ಹಂತದ ಕ್ಲಿನಿಕಲ್ ಟ್ರಯಲ್ ಗೆ ಚಾಲನೆ ನೀಡಿದ ಸಿಎಂ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು,ಡಿ.2- ಕೋವಾಕ್ಸಿನ್ ನ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಚಾಲನೆ ನೀಡಿದರು.
ಸಿಎಂ ಬಿಎಸ್ ವೈ ಅವರು ಲಸಿಕೆಯ ಮೂರನೇ ಹಂತದ ಟ್ರಯಲ್ ಗೆ ಆನ್ ಲೈನ್ ಮೂಲಕ ಚಾಲನೆ ನೀಡಿದರು. ಬೆಂಗಳೂರಿನ ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಆತ್ಮನಿರ್ಭರ್ ಯೋಜನೆಯಡಿಯಲ್ಲಿ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವಿಡ್-19 ಲಸಿಕೆ ‘ಕೋವಾಕ್ಸಿನ್’ನ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಯಲಿದೆ.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ವೈದೇಹಿ ಮೆಡಿಕಲ್ ಕಾಲೇಜಿನ ನಿರ್ದೇಶಕರಾದ ಡಾ.ರಾಜೇಶ್ ನಾಯ್ಡು, ಕ್ಲಿಂಟ್ರಾಕ್ ಇಂಟರ್ ನ್ಯಾಷನಲ್ ಪ್ರೈ.ಲಿ ಸಂಸ್ಥೆಯ ಎಂ.ಕೆ.ಶ್ರೀನಿವಾಸಮೂರ್ತಿ, ಆರೋಗ್ಯ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಜಾವೇದ್ ಅಖ್ತರ್ ಭಾಗವಹಿಸಿದ್ದರು. (ಎಂ.ಎನ್)