ಕರ್ನಾಟಕಪ್ರಮುಖ ಸುದ್ದಿಮೈಸೂರು

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ.ದೇವೇಗೌಡ ಮುಂದಾಳತ್ವದಲ್ಲಿ ಗ್ರಾ.ಪಂ.ಚುನಾವಣೆ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಮೈಸೂರು,ಡಿ.2:- ಶಾಸಕ ಜಿ.ಟಿ.ದೇವೇಗೌಡ ನಮ್ಮನ್ನು ಬಿಟ್ಟು ಎಲ್ಲಿ ಹೋಗಿದ್ದಾರೆ. ಅವರು ಇನ್ನೂ ಜೆಡಿಎಸ್ ನಲ್ಲಿಯೇ ಇದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಮೈಸೂರಿನಲ್ಲಿಂದು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ ಅವರೇ ಮೊನ್ನೆ ಜೆಡಿಎಸ್ ನಲ್ಲಿ ಇದ್ದೇನೆ ಎಂದು ಹೇಳಿದ್ದಾರೆ. ಸರ್ಕಾರ ಕಾರ್ಯಕ್ರಮಗಳಲ್ಲಿ ಬಿಜೆಪಿಯವರ ವೇದಿಕೆ ಹಂಚಿಕೊಳ್ಳುವುದು ಸಾಮಾನ್ಯ. ಇದಕ್ಕೆ ಬೇರೆ ರೀತಿಯ ಅರ್ಥಗಳನ್ನು ಕಲ್ಪಿಸಿಕೊಳ್ಳುವುದು ಬೇಡ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅವರ ಮುಂದಾಳತ್ವದಲ್ಲೇ ಗ್ರಾಮಪಂಚಾಯತ್ ಚುನಾವಣೆ ನಡೆಯಲಿದೆ. ಅವರು ಶಾಸಕರಾಗಿವಷ್ಟು ದಿನದವರೆಗೂ ನಮ್ಮ ಪಕ್ಷವನ್ನೇ ಬೆಂಬಲಿಸಬೇಕು ಎಂದರು.

ಎಚ್.ಡಿ.ಕೋಟೆ ಸೇರಿದಂತೆ ರಾಜ್ಯದ 150 ಕ್ಷೇತ್ರಗಳಿಗೆ ವಿಧಾನಸಭೆ ಚುನಾವಣಾ ಅಭ್ಯರ್ಥಿಗಳನ್ನು ಹೊಸ ವರ್ಷದ ಆರಂಭದಲ್ಲಿ ಘೋಷಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಎಚ್.ಡಿ.ಕೋಟೆ ತಾಲ್ಲೂಕಿನ ಗುಂಡತ್ತೂರು ಗ್ರಾಮದಲ್ಲಿ ಪಕ್ಷದ ಮೃತಪಟ್ಟ ಕಾರ್ಯಕರ್ತರೊಬ್ಬರ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರಿಂದ ಪಕ್ಷ ಸಂಘಟನೆಗೆ, ಕಾರ್ಯಕರ್ತರನ್ನು ಭೇಟಿಯಾಗಲು ಅನುಕೂಲವಾಗಲಿದೆ. ಈ ಸಂಬಂಧ ಈಗಾಗಲೇ ಪಕ್ಷದ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ ಎಂದು ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: