ಕರ್ನಾಟಕಪ್ರಮುಖ ಸುದ್ದಿ

ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ : ಕಪ್ಪತ್ತಗುಡ್ಡ ಈಗ ಮತ್ತೆ ಸಂರಕ್ಷಿತ ಅರಣ್ಯ ಪ್ರದೇಶ

ಬೆಂಗಳೂರು : ಸಾರ್ವಜನಿಕರ ಹೋರಾಟಕ್ಕೆ ಕೊನೆಗೂ ಮಣಿದ ರಾಜ್ಯ ಸರ್ಕಾರ ಕಪ್ಪತ್ತಗುಡ್ಡವನ್ನು ಸಂರಕ್ಷಿತ ಮೀಸಲು ಅರಣ್ಯ ಪ್ರದೇಶ ಎಂದು ಘೋಷಿಸಿ ಆದೇಶ ಹೊರಡಿಸಿದೆ.

ಕಪ್ಪತ್ತಗುಡ್ಡಕ್ಕೆ ಇದ್ದ ಸಂರಕ್ಷಿತ ಮೀಸಲು ಅರಣ್ಯ ಪ್ರದೇಶ ಸ್ಥಾನಮಾನವನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿತ್ತು. ಈ ನಿರ್ಧಾರಕ್ಕೆ ಗದಗ ಮಾತ್ರವಲ್ಲದೆ ನೆರೆಯ ಜಿಲ್ಲೆಗಳ ಜನತೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಗುಡ್ಡವು ಉತ್ತರ ಕರ್ನಾಟಕ ಜನತೆಯ ಜೀನವಾಡಿಯಾಗಿದ್ದು, ಕಪ್ಪತ್ತಗುಡ್ಡದಲ್ಲಿರುವ ಅಮೂಲ್ಯ ಔಷಧಿ ಸಸ್ಯಗಳು ಉಳಿಯಬೇಕು. ಅವು ಉಳಿಯಬೇಕಾದಲ್ಲಿ ಕಪ್ಪತ್ತಗುಡ್ಡ ಉಳಿಯಬೇಕೆಂದು ಹೋರಾಟಗಳನ್ನು ನಡೆಸಲಾಗಿತ್ತು.

ಜನತೆಯ ಹೋರಾಟಕ್ಕೆ ಕೊನೆಗೂ ಮಣಿದಿರುವ ಸರ್ಕಾರ, ಗುಡ್ಡಕ್ಕೆ ಮತ್ತೆ ಸಂರಕ್ಷಿತ ಮೀಸಲು ಅರಣ್ಯ ಪ್ರದೇಶ ಸ್ಥಾನಮಾನ ನೀಡಲು ತೀರ್ಮಾನ ಕೈಗೊಂಡಿದೆ. ಈ ವಿಷಯವಾಗಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಪ್ಪತ್ತಗುಡ್ಡವನ್ನು ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಿಸಲು ನನ್ನ ಒಪ್ಪಿಗೆ ಇದೆ. ವನ್ಯಜೀವಿ ಮಂಡಳಿಯ ಮುಂದಿನ ಸಭೆಯಲ್ಲಿ ಈ ವಿಷಯ ಪ್ರಸ್ತಾಪ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕೊನೆಗೂ ಜನತೆಯ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.

(ಎನ್‍.ಬಿ.ಎನ್‍)

Leave a Reply

comments

Related Articles

error: