ಮೈಸೂರು

ಮಹಿಳೆ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಅಪಹರಿಸಿ ಪರಾರಿ

ಮೈಸೂರು,ಡಿ.3:-ಮಹಿಳೆಯೋರ್ವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ದುಷ್ಕರ್ಮಿಗಳು ಅಪಹರಿಸಿ ಪರಾರಿಯಾಗಿರುವ ಘಟನೆ ಎನ್ ಆರ್ ಮೊಹಲ್ಲಾದ ನಾರ್ಥ ಈಸ್ಟ್ ನಲ್ಲಿ ನಡೆದಿದೆ.
ಸುಧಾ(60) ಎಂಬವರೇ ಚಿನ್ನದಸರಕಳೆದುಕೊಂಡವರಾಗಿದ್ದಾರೆ. ಇವರು ತಮ್ಮ ಮನೆಯ ಸಮೀಪ ನಡೆದುಕೊಂಡು ಹೋಗುತ್ತಿದ್ದ ವೇಳೆ ದ್ವಿಚಕ್ರವಾಹನದಲ್ಲಿ ಬಂದ ಇಬ್ಬರ ಪೈಕಿ ಓರ್ವ 20ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಇನ್ಸಪೆಕ್ಟರ್ ಅಜರುದ್ದೀನ್ ನೇತೃತ್ವದ ತಂಡ ಕಳ್ಳರ ಶೋಧ ಕಾರ್ಯಾಚರಣೆ ನಡೆಸಿದ್ದು, ಎನ್ ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: