ಮೈಸೂರು

ಗ್ರಾ.ಪಂ ಚುನಾವಣಾ ವೆಚ್ಚಕ್ಕೆ ಕಡಿವಾಣ ಹಾಕಬೇಕು : ಶಾಸಕ ಹೆಚ್.ಪಿ. ಮಂಜುನಾಥ್ ಒತ್ತಾಯ

ಮೈಸೂರು,ಡಿ.5:- ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರನ್ನು ಹುರಿದುಂಬಿಸಬೇಕು ಎಂದು ಶಾಸಕ ಹೆಚ್.ಪಿ. ಮಂಜುನಾಥ್ ತಿಳಿಸಿದರು.
ಮೈಸೂರು ಜಲದರ್ಶಿನಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು ಪಕ್ಷದ ಕಾರ್ಯಕರ್ತರಲ್ಲಿ ಪಕ್ಷದ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದು. ಗ್ರಾಮ ಪಂಚಾಯತಿಗೆ ವಿಧಾನಸಭೆಯ ಪ್ರಾಶಸ್ತ್ಯ ನೀಡಿದ್ದು ನಮ್ಮ ಕಾಂಗ್ರೆಸ್. ಗ್ರಾಮ ಪಂಚಾಯತಿಯ ಕಾರ್ಯಕ್ರಮಗಳನ್ನು ಮನೆಗೆ ತಲುಪಿಸೋ ಕಾರ್ಯಕ್ರಮ ನೀಡಿದ್ದು ಕಾಂಗ್ರೆಸ್ ಸರ್ಕಾರ. ಈಗಾಗಲೇ ಜನ ವಿರೋಧಿ ಬಿಜೆಪಿ ಕೆಲಸಗಳನ್ನು ಜನರಿಗೆ ತಲುಪಿಸಲಿದ್ದೇವೆ. ನಾವು ಸಹ ಅಭ್ಯರ್ಥಿಗಳ ಪರವಾಗಿ ಮನೆ ಮನೆಗೆ ತೆರಳಲಿದ್ದೇವೆ ಎಂದರು.
ಗ್ರಾ.ಪಂ ಚುನಾವಣೆಯಲ್ಲಿ ಹಣದ ಹೊಳೆ ಹರಿಯುವ ಆತಂಕವಿದೆ ಎನ್ನುವ ಮೂಲಕ ನ್ಯಾಯ ಸಮ್ಮತ ಚುನಾವಣೆ ಬಗ್ಗೆ ಅನುಮಾನ ವ್ಯಕ್ತಪಡಿಸಿದರು. ಗ್ರಾ.ಪಂ ಚುನಾವಣೆಯ ಅಭ್ಯರ್ಥಿಗಳಿಗೆ ಖರ್ಚು ವೆಚ್ಚದ ಮಿತಿ ಹೇರಬೇಕು. ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಚುನಾವಣಾ ಆಯೋಗ ಅಧಿಸೂಚನೆ ನೀಡಬೇಕು. ತಾ.ಪಂ, ಜಿ.ಪಂ ರೀತಿಯಲ್ಲಿ ಗ್ರಾ.ಪಂ ಚುನಾವಣಾ ವೆಚ್ಚಕ್ಕೆ ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡುವ ಅಭ್ಯರ್ಥಿಗಳು ಸಾಲಗಾರರಾಗುತ್ತಾರೆ. ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿ ಬೀದಿಗೆ ಬರುತ್ತಾರೆ. ಈ ಬಗ್ಗೆ ಚುನಾವಣಾ ಆಯೋಗ ಎಚ್ಚೆತ್ತುಕೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ಶಾಸಕ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಂಸದ ಧೃವನಾರಾಯಣ್,ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: