ದೇಶಪ್ರಮುಖ ಸುದ್ದಿ

ಅನ್ನ ಹಾಕುವ ರೈತರಿಗೆ ಬೆಂಬಲ ನೀಡುವುದು ನಮ್ಮ ಕರ್ತವ್ಯ: ರಾಹುಲ್ ಗಾಂಧಿ

ನವದೆಹಲಿ,ಡಿ.5- ರೈತರಿಗೆ ಬೆಂಬಲ ನೀಡುವುದು ನಮ್ಮ ಕರ್ತವ್ಯ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿ ಟ್ವೀಟ್ ಮಾಡಿರುವ ಅವರು, ಇಡೀ ದೇಶಕ್ಕೆ ಅನ್ನ ಹಾಕುವ ರೈತರಿಗೆ ಬೆಂಲಬಲ ನೀಡುವುದು ನಮ್ಮ ಕರ್ತವ್ಯ ಎಂದಿದ್ದಾರೆ.

ಎಂಎಸ್ ಪಿ ಮತ್ತು ಎಪಿಎಂಸಿ ಇಲ್ಲದೆ ಬಿಹಾರದ ರೈತರು ತೀವ್ರ ತೊಂದರೆಯಲ್ಲಿದ್ದಾರೆ, ಈಗ ಪ್ರಧಾನಿ ಮೋದಿ ದೇಶವನ್ನು ಒಂದೇ ತೊಂದರೆಗೆ ತಳ್ಳುತ್ತಿದ್ದಾರೆ. ಇಡೀ ದೇಶಕ್ಕೆ ಅನ್ನ ಹಾಕುವ ರೈತರಿಗೆ ಇಂತಹ ಪರಿಸ್ಥಿತಿಯಲ್ಲಿ ಬೆಂಬಲ ನೀಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. (ಎಂ.ಎನ್)

Leave a Reply

comments

Related Articles

error: