ಮೈಸೂರು

ಕೃಷಿ ಸಚಿ ಬಿ.ಸಿ.ಪಾಟೀಲ್ ಹೇಳಿಕೆಗೆ ಖಂಡನೆ : ಬಹಿರಂಗ ಕ್ಷಮೆಗೆ ಒತ್ತಾಯ

ಮೈಸೂರು,ಡಿ.5:- ಆತ್ಮಹತ್ಯೆಗೆ ಶರಣಾಗುವ ರೈತರು ಹೇಡಿಗಳು ಎಂದು ನಾಡಿಗೆ ಅನ್ನ ನೀಡುವ ಅನ್ನದಾತರ ಬಗ್ಗೆ ಹಗುರವಾಗಿ ಮಾತನಾಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್ ಒತ್ತಾಯಿಸಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಹಾಕಿದ ಬಂಡವಾಳವೂ ಕೈ ಸೇರದೆ ಹತಾಶ ಸ್ಥಿತಿ ತಲುಪಿ, ಸಾಲ ತೀರಿಸಲು ಸಾಧ್ಯವಾಗದೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈಗಾಗಲೇ ದೇಶದಲ್ಲಿ 7 ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಆತ್ಮಹತ್ಯೆ ಅಲ್ಲ, ಸರ್ಕಾರ ಮಾಡಿದ ಕೊಲೆ ಎಂದು ಟೀಕಿಸಿದ್ದಾರೆ.
ಜಿಲ್ಲೆಗಳಲ್ಲಿ ಮೆಕ್ಕೆಜೋಳದ ಬೆಲೆ ಪಾತಾಳಕ್ಕೆ ಕುಸಿದಿದೆ. ಹತ್ತಿ ಬೆಳೆದ ರೈತರು ಬೀದಿಪಾಲಾಗಿದ್ದಾರೆ. ಕೃಷಿ ಪರಿಕರಗಳ ಬೆಲೆಗಳು ಗಗನಕ್ಕೇರಿವೆ. ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ರೈತರಿಗೆ ನ್ಯಾಯ ಕೊಡಿಸಬೇಕು ಅದನ್ನು ಬಿಟ್ಟು ಪ್ರಚಾರಕ್ಕಾಗಿ ರೈತರನ್ನು ಟೀಕಿಸುವುದು ಸರಿಯಲ್ಲ ಈ ಕೂಡಲೇ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: