ಮೈಸೂರು

ಸಕ್ರಿಯ ರಾಜಕಾರಣದಲ್ಲಿಯೇ ಇರುತ್ತೇನೆ : ವಿ.ಶ್ರೀನಿವಾಸ್ ಪ್ರಸಾದ್

ಮೊದಲು ಬಹಳ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸವಿತ್ತು. ಆದರೆ ಕೊನೆಯ ಎರಡು ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಹಣದ ಹೊಳೆ ಹರಿಸಿತು. ಆದ್ದರಿಂದ ಮತದ ಅಂತರ ಕಡಿಮೆಯಾಗುತ್ತದೆ.  ಸಕ್ರಿಯ ರಾಜಕಾರಣದಲ್ಲಿಯೇ ಇರುತ್ತೇನೆ  ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

ನಂಜನಗೂಡು ಉಪಚುನಾವಣೆಯ ಫಲಿತಾಂಶ  ಹೊರಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿರುವ ತಮ್ಮ ನಿವಾಸದಲ್ಲಿ ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಿವಾಸ್ ಪ್ರಸಾದ್, ಸುಮಾರು ಐದು ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ. ಸ್ಥಳೀಯ ಪೊಲೀಸ್ ಇಲಾಖೆಯು ಸರ್ಕಾರ ಜೊತೆ ಸೇರಿತು. ಕೇಂದ್ರ ಚುನಾವಣಾ ಆಯೋಗದಿಂದ ಬಂದವರು ಎಲ್ಲೂ ಸುತ್ತಲಿಲ್ಲ. ಎಷ್ಟೇ ಹಣ ಹಂಚಿದರೂ ಜನರು ನನ್ನ ಪರವಾಗಿದ್ದಾರೆ ಎಂದು ತಿಳಿಸಿದರು. ಮುಖ್ಯಮಂತ್ರಿಗೆ ನನ್ನ ವಿರುದ್ಧ ದ್ವೇಷವಿತ್ತು. ಹಾಗಾಗಿ ರಾಜೀನಾಮೆ ನೀಡಿದೆ. ದುರುದ್ದೇಶದಿಂದ ಮುಖ್ಯಮಂತ್ರಿ ಮಾಡಿದ ರೀತಿ ಯಾರೂ ಅವಮಾನ ಮಾಡಲಿಲ್ಲ. ಆದ್ದರಿಂದ ಇದು ಸ್ವಾಭಿಮಾನ, ಆತ್ಮಗೌರವದ ಪ್ರಶ್ನೆಯಾಗಿದೆ. ಅದನ್ನು ಜನರಿಗೆ ಮನದಟ್ಟು ಮಾಡಿದ್ದೇನೆ. ಈ ಚುನಾವಣೆ ನಂತರ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ಆದರೆ ಸಕ್ರಿಯ ರಾಜಕಾರಣದಲ್ಲಿಯೇ ಇರುತ್ತೇನೆ ಎಂದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: