ಮೈಸೂರು

ಬಂದ್ ವಿಫಲ ಎಂಬ ಮುಖ್ಯಮಂತ್ರಿಯವರ ಹೇಳಿಕೆ ಅಮಾನುಷ : ಡಾ.ಪುಷ್ಪಾ ಅಮರನಾಥ್ ಕಿಡಿ

ಮೈಸೂರು,ಡಿ.9:- ಬಂದ್ ವಿಫಲ ಎಂಬ ಮುಖ್ಯಮಂತ್ರಿಯವರ ಹೇಳಿಕೆ ಅಮಾನುಷ ಎಂದು ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಕಿಡಿಕಾರಿದ್ದಾರೆ.
ಮೈಸೂರು ಪತ್ರಕರ್ತರ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರೈತರ ಹೆಸರಿನಲ್ಲಿ ಅಧಿಕಾರ ಹಿಡಿದ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದಿಂದ ಇಂತಹ ಹೇಳಿಕೆ ಅಮಾನವೀಯ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದರು.

ಬಂದ್ ಮಾಡಿದ ಮೇಲೆ ಚರ್ಚೆಗೆ ಬನ್ನಿ ಎನ್ನುವುದು ಹಾಸ್ಯಾಸ್ಪದ. ಭಯೋದ್ಪಾದಕರು ಬಂದ್ ನಲ್ಲಿ ಭಾಗವಹಿಸಿದ್ದಾರೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಅನ್ನದಾತರನ್ನು ಭಯೋತ್ಪಾದಕರು ಎನ್ನುವ ನಿಮಗೆ ನೈತಿಕತೆ ಇದೆಯಾ. ಸಂಸದರಾಗಿರಲು ನೀವು ನಾಲಾಯಕ್. ಈ ಕೂಡಲೇ ನೀವು ರಾಜೀನಾಮೆ ನೀಡಬೇಕು. 25 ಮಂದಿ ಸಂಸದರು ಎಲ್ಲಿದ್ದೀರಾ? ರೈತರ ಪರವಾಗಿ ಧ್ವನಿ ಎತ್ತಿದ್ದೀರಾ? ಗ್ಯಾಸ್ ಬೆಲೆ 50ರೂ. ಹೆಚ್ಚಳವಾಗಿದೆ ಇನ್ನುಮುಂದೆ ಸಬ್ಸಿಡಿ ಇಲ್ಲ. ಇನ್ನು ಎಷ್ಟು ದಿನ ಕಣ್ಣೊರೆಸೊ ತಂತ್ರ ಮಾಡ್ತೀರಾ.
ಪೆಟ್ರೋಲ್, ಡೀಸೆಲ್ ಬೆಲೆ 40 ರೂ. ಇದ್ದಾಗ ನೀವು ಪ್ರತಿಭಟಿಸಿದ್ರಿ. ಈಗ ಏನು ಮಾಡ್ತಿದ್ದೀರಾ ಎಂದು ವಾಗ್ದಾಳಿ ನಡೆಸಿದರು.

ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಕೃಷಿ ಸಚಿವರು ಹೇಳುತ್ತಾರೆ. ರೈತರು ಹೇಡಿಗಳಲ್ಲ ನೀವು ಹೇಡಿಗಳು. ಬಿಜೆಪಿ ನಾಯಕರಿಗೆ ರೈತರ ಮೇಲೆ ಗೌರವವಿಲ್ಲ. ಒಬ್ಬ ಶಾಸಕರು, ಸಂಸದರು ಮಹಿಳೆಯರ ಬಗ್ಗೆ ಮಾತನಾಡುತ್ತಿಲ್ಲ. ಬಿಜೆಪಿ ಆಡಳಿತದಿಂದಾಗಿ ಯಾರೂ ನೆಮ್ಮದಿಯಿಂದಿಲ್ಲ.
ಅದಾನಿ, ಅಂಬಾನಿ ದೊಡ್ಡ ಕಾರ್ಪೊರೇಟ್ ಕಂಪನಿ ಮಾಲೀಕರು ನೆಮ್ಮದಿಯಾಗಿದ್ದಾರೆ. ಆದರೆ ರೈತರು, ಕಾರ್ಮಿಕರು, ಮಹಿಳೆಯರಿಗೆ ದೇಶದಲ್ಲಿ ರಕ್ಷಣೆ ಇಲ್ಲ. ಮಹಿಳೆಯರ ಮೇಲೆ ಅತ್ಯಾಚಾರ ನಿರಂತರವಾಗಿದೆ. ಈ ಎಲ್ಲದರ ವಿರುದ್ಧ ಕಾಂಗ್ರೆಸ್ ಮಹಿಳಾ ಘಟಕದಿಂದ ಕರಪತ್ರವನ್ನು ಹಂಚುವ ಕೆಲಸ ಮಾಡುತ್ತೇವೆ. ಕಾಂಗ್ರೆಸ್ ಪಕ್ಷದವರಿಗೆ ಪ್ರತಿಭಟಿಸಲು ಅವಕಾಶ ನೀಡುತ್ತಿಲ್ಲ. ಪ್ರತಿಕೃತಿ ದಹನ ಮಾಡಲು ಅವಕಾಶ ನೀಡುತ್ತಿಲ್ಲ. ಹೊರಗಡೆ ಪ್ರತಿಭಟಿಸಿದ್ರೆ ಜೈಲಿಗೆ ಹಾಕೋದಾಗಿ ಪೊಲೀಸರು ಬೆದರಿಕೆ ಹಾಕುತ್ತಾರೆ. ಬಿಜೆಪಿಯವರು ಪೊಲೀಸರ ಮೂಲಕ ನಮ್ಮ ಹೋರಾಟ ಹತ್ತಿಕ್ಕುತ್ತಿದ್ದಾರೆ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: