ದೇಶಪ್ರಮುಖ ಸುದ್ದಿ

ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ಬೆಂಗಾವಲು ವಾಹನಗಳ ಮೇಲೆ ಕಲ್ಲು ತೂರಾಟ

ಡೈಮಂಡ್ ಹಾರ್ಬರ್(ಪಶ್ಚಿಮ ಬಂಗಾಳ),ಡಿ.10- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ.

ನಡ್ಡಾ ಅವರ ಜತೆಗಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರ ಕಾರಿನ ಮೇಲೂ ದಾಳಿ ನಡೆದಿದೆ. ತಂಡದೊಂದಿಗೆ ತೆರಳುತ್ತಿದ್ದ ಮಾಧ್ಯಮದವರ ವಾಹನಗಳಿಗೂ ಹಾನಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ನಡ್ಡಾ ಅವರು, ಪಶ್ಚಿಮ ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಗೂಂಡಾರಾಜ್ಯದ ಆಡಳಿತ ನಡೆಯುತ್ತಿದೆ ಎಂದು ಟೀಕಿಸಿದ್ದಾರೆ.

ಕೋಲ್ಕತ್ತಾದಿಂದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಪ್ರದೇಶಕ್ಕೆ ತೆರಳುತ್ತಿದ್ದ ನಮ್ಮ ವಾಹನಗಳನ್ನು ದಾರಿಯಲ್ಲಿ ಅಡ್ಡಗಟ್ಟಿದ ಟಿಎಂಸಿ ಬೆಂಬಲಿಗರು, ನಡ್ಡಾ ಅವರ ವಾಹನ ಸೇರಿದಂತೆ, ತಂಡದಲ್ಲಿದ್ದ ಇತರೆ ನಾಯಕರ ವಾಹನಗಳ ಮೇಲೆ ಕಲ್ಲು ತೂರಿದರು. ಈ ಮೂಲಕ ಟಿಎಂಸಿ ಅವರ ನಿಜ ಬಣ್ಣ ಬಯಲಾಗಿದೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡ ದಿಲೀಪ್ ಘೋಷ್ ತಿಳಿಸಿದ್ದಾರೆ. ತಕ್ಷಣ ಮಧ್ಯ ಪ್ರವೇಶಿಸಿದ ಪೊಲೀಸರು, ಬೆಂಗಾವಲು ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: