ದೇಶಪ್ರಮುಖ ಸುದ್ದಿ

ಗಂಡು ಮಗುವಿಗೆ ಜನ್ಮ ನೀಡಿದ ಮುಕೇಶ್ ಅಂಬಾನಿ ಸೊಸೆ ಶ್ಲೋಕಾ

ಮುಂಬೈ,ಡಿ.10- ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರ ಸೊಸೆ ಶ್ಲೋಕಾ ಮೆಹ್ತಾ ಅವರು ಇಂದು ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಮುಂಬೈನ ಆಸ್ಪತ್ರೆಯಲ್ಲಿ ಆಕಾಶ್​ ಅಂಬಾನಿ ಅವರ ಪತ್ನಿ ಶ್ಲೋಕಾ ಮೆಹ್ತಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

ಧೀರೂಭಾಯಿ ಹಾಗೂ ಕೋಕಿಲಾಬೆನ್ ಅಂಬಾನಿ ಕುಟುಂಬದ ಮರಿಮೊಮ್ಮಗನನ್ನು ಆತ್ಮೀಯವಾಗಿ ಸ್ವಾಗತಿಸಿದ್ದು, ಜಗತ್ತಿನ ನಾಲ್ಕನೇ ಅತಿ ದೊಡ್ಡ ಶ್ರೀಮಂತ ವ್ಯಕ್ತಿ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರು ಅಜ್ಜ, ಅಜ್ಜಿ ಆಗಿ ಭಡ್ತಿ ಪಡೆದಿದ್ದಾರೆ.

ಮಗುವಿನ ಆಗಮನದ ಕುರಿತು ಮುಕೇಶ್​ ದಂಪತಿ ಸಂತಸ ಹಂಚಿಕೊಂಡಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯದಿಂದ ಇರುವುದಾಗಿ ಹೇಳಿದ್ದಾರೆ. ಕೃಷ್ಣ ಪರಮಾತ್ಮನ ದಯೆ ಮತ್ತು ಆಶೀರ್ವಾದದಿಂದ ಶ್ಲೋಕಾ ಹಾಗೂ ಆಕಾಶ್ ಅಂಬಾನಿ ಅವರಿಗೆ ಗಂಡು ಸಂತಾನವಾಗಿದೆ ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷ ಮಾರ್ಚ್ ನಲ್ಲಿ ಆಕಾಶ್ ಅಂಬಾನಿ ಹಾಗೂ ಶ್ಲೋಕಾ ಮೆಹ್ತಾ ಅವರ ವಿವಾಹ ಅದ್ಧೂರಿಯಾಗಿ ನೆರವೇರಿತ್ತು. (ಏಜೆನ್ಸೀಸ್, ಎಂ.ಎನ್)

 

Leave a Reply

comments

Related Articles

error: