
ಪ್ರಮುಖ ಸುದ್ದಿಮೈಸೂರು
ಸಾಂಸ್ಕೃತಿಕ ನಗರಿ ಮೈಸೂರು- ಕಡಲನಗರಿ ಮಂಗಳೂರು ನಡುವಿನ ವಿಮಾನ ಹಾರಾಟಕ್ಕೆ ಚಾಲನೆ
ಮೈಸೂರು,ಡಿ.11:- ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಸಾಂಸ್ಕೃತಿಕ ನಗರಿ ಮೈಸೂರು- ಕಡಲನಗರಿ ಮಂಗಳೂರು ನಡುವಿನ ವಿಮಾನ ಹಾರಾಟಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿಂದು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು.
ಮೆ.ಅಲಯನ್ಸ್ ಏರ್ ಸಂಸ್ಥೆಯ ವಿಮಾನ ಸೇವೆಗೆ ಮುಂದೆ ಬಂದಿದ್ದು ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ವಿಮಾನ ಸೇವೆ ಒದಗಿಸಲಿದೆ. ಈ ದಿನಗಳಲ್ಲಿ 11.20ಕ್ಕೆ ಮೈಸೂರಿನಿಂದ ಹೊರಡುವ ವಿಮಾನವು ಮಧ್ಯಾಹ್ನ 12.30ಕ್ಕೆ ಮಂಗಳೂರು ತಲುಪಲಿದೆ. ಹಾಗೆಯೇ ಮಧ್ಯಾಹ್ನ 12.55ಕ್ಕೆ ಅಲ್ಲಿಂದ ಹೊರಟು ಮಧ್ಯಾಹ್ನ 1.55ಕ್ಕೆ ಮೈಸೂರು ತಲುಪಲಿದೆ. ಮೈಸೂರು-ಮಂಗಳೂರು ನಗರಗಳ ನಡುವೆ ವಿಮಾನ ಹಾರಾಟ ಸೇವೆ ಬೇಡಿಕೆ ಹಲವು ತಿಂಗಳು ಹಿಂದಿನಿಂದ ಇತ್ತಾದರೂ ಈ ನಡುವೆ ಕೋವಿಡ್ ಹಿನ್ನೆಲೆಯಲ್ಲಿ ವಿಮಾನ ಹಾರಾಟ ಸಾಕಾರಗೊಳಿಸಲು ಸಾಧ್ಯವಿರಲಿಲ್ಲ. ಇದೀಗ ಕೊರೋನಾ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿರುವುದರಿಂದ ಏರ್ ಅಲಯನ್ಸ್ ಸೇವೆ ಒದಗಿಸಲು ಮುಂದೆ ಬಂದಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಆರ್. ಮಂಜುನಾಥ್ ತಿಳಿಸಿದರು.
ಈ ಸಂದರ್ಭ ಶಾಸಕ ಜಿ.ಟಿ.ದೇವೇಗೌಡ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)