ಮೈಸೂರು

ಯಶಸ್ವಿಯಾಗಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರ

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ರೆಡ್ ಕ್ರಾಸ್ ಘಟಕದ ವತಿಯಿಂದ ನೇತ್ರಧಾಮ ಕಣ್ಣಿನ ಆಸ್ಪತ್ರೆ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಇತ್ತೀಚೆಗೆ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಶಿಬಿರದಲ್ಲಿ ನೇತ್ರಧಾಮ ಕಣ್ಣಿನ ಆಸ್ಪತ್ರೆಯ ಸಿಬ್ಬಂದಿಗಳಾದ ಡಾ.ನವೀನ್, ರಘು, ಮಹದೇವಯ್ಯ, ಜಾಫರ್, ಅಭಿರಾಮ್ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮೈಸೂರು ವಿಭಾಗದ ಅಧ್ಯಕ್ಷ ಡಾ.ಗುರುಮೂರ್ತಿ, ಉಪಾಧ್ಯಕ್ಷ ಮಹದೇವಪ್ಪ, ಕಾರ್ಯದರ್ಶಿ ವನಜ ಪಾಲ್ಗೊಂಡಿದ್ದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಚ್.ಕೊಂಡರಸಯ್ಯ ವಹಿಸಿದ್ದು, ಕಾರ್ಯಕ್ರಮದ ಅಧಿಕಾರಿ ಡಾ.ಪಿ.ಶಿವಕುಮಾರ್ ನೇತೃತ್ವವಹಿಸಿದ್ದರು. ಶಿಬಿರದಲ್ಲಿ ಸುಮಾರು 243ಮಂದಿ ಪಾಲ್ಗೊಂಡು  ಪ್ರಯೋಜನ ಪಡೆದರು.

Leave a Reply

comments

Related Articles

error: