ಮೈಸೂರು

ಚುನಾವಣೆಯಲ್ಲಿ ಗೆಲುವು : ಮೈಸೂರು ಕಾರ್ಯಕರ್ತರಿಂದ ಸಂಭ್ರಮಾಚರಣೆ

ಗುಂಡ್ಲುಪೇಟೆ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ  ಉಪಚುನಾವಣೆಯಲ್ಲಿ  ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮವನ್ನು ಆಚರಿಸಿದರು.

ಮೈಸೂರಿನ ಕಾಂಗ್ರೆಸ್ ಕಚೇರಿ ಎದುರು ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು. ಅಲ್ಲೇ ಅಕ್ಕಪಕ್ಕದ ತರಕಾರಿ ಮಾರುಕಟ್ಟೆಯ ವ್ಯಾರಿಗಳಿಗೆ ಸಿಹಿ ವಿತರಿಸಿ ಸಂಭ್ರಮಾಚರಣೆ ನಡೆಸಿದರು. ಗೀತಾ ಮಹದೇವಪ್ರಸಾದ್, ಕಳಲೆಕೇಶವಮೂರ್ತಿ ಪರ ಘೋಷಣೆಗಳನ್ನು ಕೂಗಿದರು. ಈ ಸಂದರ್ಭ ಮಾತನಾಡಿದ ಕಾರ್ಯಕರ್ತರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರದ ಜನಪರ ಯೋಜನೆಗಳನ್ನು ಜನತೆ ಸ್ವಾಗತಿಸಿದ್ದಾರೆ. ಇದರಿಂದ ಅಭ್ಯರ್ಥಿಗಳ ಗೆಲುವು ಸಾಧ್ಯವಾಯಿತು ಎಂದರು.

ಕಾಂಗ್ರೆಸ್ ಕಾರ್ಯಕರ್ತರಾದ ಅಶೋಕ್, ವೆಂಕಟೇಶ್, ಚಂದ್ರ ಸೇರಿದಂತೆ ನೂರಾರು ಕಾರ್ಯಕರ್ತರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: