ಕರ್ನಾಟಕಪ್ರಮುಖ ಸುದ್ದಿ

ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ವೈಮಾನಿಕ ವಿಜ್ಞಾನಿ ಪ್ರೊ. ರೊದ್ದಂ ನರಸಿಂಹ ಇನ್ನಿಲ್ಲ

ರಾಜ್ಯ( ಬೆಂಗಳೂರು)ಡಿ.15:- ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಖ್ಯಾತ ವೈಮಾನಿಕ ವಿಜ್ಞಾನಿ ಪ್ರೊ. ರೊದ್ದಂ ನರಸಿಂಹ ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ನಿಧನರಾದರು.
ಅವರಿಗೆ 88ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣದಿಂದಾಗಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು. ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

1933ರ ಜುಲೈ 20ರಂದು ಬೆಂಗಳೂರಿನಲ್ಲಿ ಜನಿಸಿದ್ದ ಅವರು ಐಐಎಸ್​ಸಿನಲ್ಲಿ ಅವರು ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ, ಬಳಿಕ ನ್ಯಾಷನಲ್ ಸ್ಪೇಸ್ ಲ್ಯಾಬೋಲೇಟರಿಯ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಬೆಂಗಳೂರಿನ ಜವಾಹರಲಾಲ್ ನೆಹರು ವೈಜ್ಞಾನಿಕ ಸಂಶೋಧನಾ ಕೇಂದ್ರದ ಅಧ್ಯಕ್ಷ ರಾಗಿದ್ದರು. 2013ರಲ್ಲಿ ಅವರಿಗೆ ಪದ್ಮವಿಭೂಷಣ ಪುರಸ್ಕಾರ ನೀಡಿ ಸರ್ಕಾರ ಗೌರವಿಸಿತ್ತು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: