
ದೇಶಪ್ರಮುಖ ಸುದ್ದಿ
ರೈತರ ಪ್ರತಿಭಟನೆ: ನಾಳೆ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ
ನವದೆಹಲಿ,ಡಿ.15-ಕೃಷಿ ಮಸೂದೆ ವಿರೋಧಿಸಿ ರೈತರು ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಗಳನ್ನು ನಡೆಸುತ್ತಿರುವ ನಡುವಲ್ಲೇ ನಾಳೆ (ಬುಧವಾರ) ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಾಳೆ ಬೆಳಿಗ್ಗೆ 11.25ರ ಸುಮಾರಿಗೆ ಸಂಪುಟ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.
ಹಲವು ದಿನಗಳಿಂದಲೂ ರೈತರು ದೆಹಲಿ ಗಡಿ ಪ್ರದೇಶದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಮಸೂದೆ ರದ್ದುಪಡಿಸುವಂತೆ ಆಗ್ರಹಿಸುತ್ತಿದ್ದಾರೆ. ಪ್ರತಿಭಟನೆ ನಡುವಲ್ಲೇ ಸಂಪುಟ ಸ ಭೆ ನಡೆಯುತ್ತಿರುವುದು ತೀವ್ರ ಕುತೂಹಲವನ್ನು ಮೂಡಿಸಿದೆ. (ಏಜೆನ್ಸೀಸ್, ಎಂ.ಎನ್)