ಮೈಸೂರು

ಮರಕ್ಕೆ ಡಿಕ್ಕಿ ಹೊಡೆದ ಬಸ್ಸು : ಇಬ್ಬರ ಸ್ಥಿತಿ ಗಂಭೀರ

ಚಾಲಕನ ನಿಯಂತ್ರಣ ತಪ್ಪಿದ ಡಿಲಕ್ಸ್ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹನ್ನೊಂದು  ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಗುರುವಾರ ಬೆಳಗಿನ ಜಾವ ಕ್ಯಾಲಿಕಟ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್, ಶ್ರೀರಂಗಪಟ್ಟಣದ ಕೆಆರ್‍ಎಸ್ ರಸ್ತೆಯ ಪಂಪ್ ಹೌಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.  ಪರಿಣಾಮ ಬಸ್ಸಿನಲ್ಲಿದ್ದ ಹನ್ನೊಂದು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನು ಸ್ಥಳೀಯರು ಮತ್ತು ಪೊಲೀಸರ ನೆರವಿನೊಂದಿಗೆ ಮೈಸೂರಿನ ಅಪೊಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೆಆರ್‍ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್-ಎಸ್-ಎಚ್)

Leave a Reply

comments

Related Articles

error: