ದೇಶಪ್ರಮುಖ ಸುದ್ದಿ

ಕೃಷಿ ಮಸೂದೆ ಪ್ರತಿಭಟನೆ : ಶೀಘ್ರದಲ್ಲೇ ಪರಿಹಾರ ದೊರೆಯಲಿದೆ ; ಕೃಷಿ ಸಚಿವ ತೋಮರ್

ದೇಶ(ನವದೆಹಲಿ)ಡಿ.17:- ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ ಮೂರು ವಾರಗಳಿಂದ ದೆಹಲಿ ಗಡಿಯಲ್ಲಿ ಪ್ರತಿಭಟನೆಯ ನಡೆಸುತ್ತಿರುವ ನಡುವೆಯೇ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಈ ವಿಷಯದಲ್ಲಿ ಪಂಜಾಬ್ ‌ನ ರೈತ ಸಂಘಟನೆಗಳು ಸೇರಿದಂತೆ ದೇಶದ ಹಲವು ರೈತ ಸಂಘಟನೆಗಳೊಂದಿಗೆ ಮಾತುಕತೆ ನಡೆಯುತ್ತಿದೆ. ಶೀಘ್ರದಲ್ಲೇ ಪರಿಹಾರವನ್ನು ಕಂಡುಹಿಡಿಯಲಾಗುವುದು ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೃಷಿ ಕ್ಷೇತ್ರದಲ್ಲಿ ಐತಿಹಾಸಿಕ ಸುಧಾರಣೆಗಳನ್ನು ಗುರಿಯಾಗಿರಿಸಿಕೊಂಡು ಕೃಷಿ ಕಾನೂನುಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಗ್ವಾಲಿಯರ್‌ನಲ್ಲಿ ಬಿಜೆಪಿ ಆಯೋಜಿಸಿದ್ದ ರೈತ ಸಮಾವೇಶದಲ್ಲಿ ಭಾಗವಹಿಸುವ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ತೋಮರ್, “ಪಂಜಾಬ್ ( ರೈತರ ಸಂಘಟನೆಗಳು ಸೇರಿದಂತೆ ಹಲವಾರು ರೈತ ಸಂಘಟನೆಗಳೊಂದಿಗೆ ಮಾತುಕತೆ ನಡೆಯುತ್ತಿದ್ದು, ಶೀಘ್ರದಲ್ಲೇ ಪರಿಹಾರ ಹೊರಬರಲಿದೆ ಎಂದಿದ್ದಾರೆ.
ಕೃಷಿ ಕಾನೂನುಗಳ ವಿಷಯದಲ್ಲಿ ರೈತರನ್ನು ದಾರಿ ತಪ್ಪಿಸುವ ವಿರೋಧ ಪಕ್ಷಗಳು ತಮ್ಮ ಉದ್ದೇಶದಲ್ಲಿ ಯಶಸ್ವಿಯಾಗುವುದಿಲ್ಲ ಎಂದು ಕೃಷಿ ಸಚಿವರು ಹೇಳಿದ್ದಾರೆ. ಪ್ರಾರಂಭವಾದ ಕೃಷಿ ಸುಧಾರಣೆಯ ಕಾರ್ಯವು ರೈತನ ಜೀವನವನ್ನು ಬದಲಾಯಿಸುತ್ತದೆ ಎಂದು ತೋಮರ್ ಹೇಳಿದ್ದಾರೆ.
ನರೇಂದ್ರ ಸಿಂಗ್ ತೋಮರ್, “ದೇಶಾದ್ಯಂತದ ರೈತರು ಹೊಸ ಕಾನೂನುಗಳನ್ನು ಬೆಂಬಲಿಸುತ್ತಿದ್ದಾರೆ. ಅನೇಕ ಸಂಘಟನೆಗಳು ಅವರನ್ನು ಭೇಟಿ ಮಾಡಿವೆ. ಪಂಜಾಬ್‌ ನ ರೈತರು ಕೋಪಗೊಂಡಿದ್ದಾರೆ, ಆದರೆ ಶೀಘ್ರದಲ್ಲೇ ಪರಿಹಾರ ಸಿಗಲಿದೆ. “ರೈತರ ಸಾರ್ವಜನಿಕ ಜಾಗೃತಿ ಅಭಿಯಾನವನ್ನು ದೇಶಾದ್ಯಂತ ನಡೆಸಲಾಗುತ್ತಿದೆ ಎಂದಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: