ದೇಶಪ್ರಮುಖ ಸುದ್ದಿ

ಎರಡು ದಿನದ ಪ್ರವಾಸಕ್ಕಾಗಿ ಪಶ್ಚಿಮ ಬಂಗಾಳಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಕೋಲ್ಕತ್ತಾ,ಡಿ.19-ಬಿಜೆಪಿ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎರಡು ದಿನಗಳ ಪಶ್ಚಿಮ ಬಂಗಾಳ ಭೇಟಿಗಾಗಿ ಶನಿವಾರ ಕೋಲ್ಕತ್ತಾಕ್ಕೆ ಆಗಮಿಸಿದ್ದಾರೆ. ಶಾ ಅವರನ್ನು ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ರಾಜ್ಯ ಬಿಜೆಪಿ ಮುಖಂಡರು ಸ್ವಾಗತಿಸಿದರು.

ಮುಂದಿನ ಕೆಲವು ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಚಟುವಟಿಕೆಗಳನ್ನು ಚುರುಕುಗೊಳಿಸಲು ಅವರು ಈ ಎರಡು ದಿನ ಸ್ಥಳೀಯ ನಾಯಕರೊಂದಿಗೆ ಚರ್ಚಿಸಲಿದ್ದಾರೆ.

ಕೋಲ್ಕತ್ತಾಕ್ಕೆ ಕಾಲಿಟ್ಟ ಬಳಿಕ ಟ್ವೀಟ್ ಮಾಡಿರುವ ಅಮಿತ್ ಶಾ, ‘ಗುರುದೇವ್ ಟ್ಯಾಗೋರ್, ಈಶ್ವರ ಚಂದ್ರ ವಿದ್ಯಾಸಾಗರ್ ಮತ್ತು ಶ್ಯಾಮ್ ಪ್ರಸಾದ್ ಮುಖರ್ಜಿ ಅವರಂತಹ ಮಹಾನ್ ವ್ಯಕ್ತಿಗಳ ಪುಣ್ಯಭೂಮಿಗೆ ನಾನು ತಲೆಬಾಗುತ್ತೇನೆ’ ಎಂದಿದ್ದಾರೆ.

ಅಮಿತ್ ಶಾ ಭೇಟಿ ಬಿಜೆಪಿಯಲ್ಲಿ ಹೊಸ ಬದಲಾವಣೆಗಳನ್ನು ತರುವ ಸಾಧ್ಯತೆ ಇದ್ದು, ಅಮಿತ್ ಶಾ ಅವರು ಶನಿವಾರ ಮಿಡ್ನಾಪುರ್‌ದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಟಿಎಂಸಿಎ ಅನೇಕ ಬೆಂಬಲಿಗರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಏಪ್ರಿಲ್-ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅಲ್ಲಿಯವರೆಗೆ ಪ್ರತಿ ತಿಂಗಳೂ ಅಮಿತ್ ಶಾ ಮತ್ತು ಜೆಪಿ ನಡ್ಡಾ ಅವರು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.  (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: