ಮೈಸೂರು

ಹಾವು ಕಚ್ಚಿ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವು

ಮೈಸೂರು,ಡಿ.19:- ಹಾವು ಕಚ್ಚಿ ಚಿಕಿತ್ಸೆ ಫಲಕಾರಿಯಾಗದೇ ಯುವಕನೋರ್ವ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಕಾಳಬೋಚನಹಳ್ಳಿ ಗ್ರಾಮದಲ್ಲಿ ಜಮೀನಿನಲ್ಲಿ ರಾಗಿ ಬೆಳೆ ಕಟಾವು ಮಾಡುವಾಗ ನಡೆದಿದೆ.
ಮೃತನನ್ನು ಸಂತೋಷ್(21) ಎಂದು ಹೇಳಲಾಗಿದ್ದು, ಈತ ಅಂತಿಮ ವರ್ಷದ ಪದವಿ ವಿದ್ಯಾರ್ಥಿಯಾಗಿದ್ದ. ಹನಗೋಡು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂತೋಷ್ ಮೃತಪಟ್ಟಿದ್ದು, ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: