ಮೈಸೂರು

ಜೆಡಿಎಸ್ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ದಿನಾಚರಣೆ : ಸನ್ಮಾನ

ಮೈಸೂರಿನ ಶೇಷಾದ್ರಿ ಅಯ್ಯರ್ ರಸ್ತೆಯಲ್ಲಿರುವ ಜನತಾದಳ (ಜಾತ್ಯಾತೀತ) ಪಕ್ಷದ ಕಚೇರಿಯಲ್ಲಿ ಡಾ.ಬಾಬು ಜಗಜೀವನರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ.ಬಾಬು ಜಗಜೀವನರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನೆರವೇರಿಸಲಾಯಿತು. ಈ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಕೃಷ್ಣರಾಜ, ಚಾಮರಾಜ, ನರಸಿಂಹರಾಜ ವಿಧಾನಸಭಾ ಕ್ಷೇತ್ರದಿಂದ ತಲಾ ಐವರು, ಒಟ್ಟು 15ಮಂದಿ ವಿಕಲಚೇತನರಿಗೆ ತಲಾ ಒಂದು ಸಾವಿರ ರೂ.ಸಹಾಯಧನವನ್ನು ವಿತರಿಸಲಾಯಿತು. ಎಸ್.ಸಿ, ಎಸ್.ಟಿ ಮೀಸಲು ಕ್ಷೇತ್ರದಿಂದ ವಿ.ಶೈಲೇಂದ್ರ, ಟಿ.ರಾಮು, ಇಂದಿರಾ ಮಹೇಶ್ ಮತ್ತು ಪಕ್ಷದ 12 ಮಂದಿ ದಲಿತ ಮುಖಂಡರನ್ನು ಸನ್ಮಾನಿಸಲಾಯಿತು. ಮುಖ್ಯಮಂತ್ರಿಗಳ ಪದಕ ಪಡೆದ ಎನ್.ಆರ್.ಠಾಣೆಯ ಇನ್ಸಪೆಕ್ಟರ್ ಅಶೋಕ್ ಕುಮಾರ್, ಅಪರಾಧ ವಿಭಾಗದ ರಮೇಶ್ ಅವರನ್ನು  ಮೇಯರ್ ಎಂ.ಜೆ.ರವಿಕುಮಾರ್ ಸನ್ಮಾನಿಸಿದರು. ಬಳಿಕ ಮಾತನಾಡಿದ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬುಜಗಜೀವನರಾಂ  ಅವರ ಕುರಿತು ವಿವರಿಸಿದರು.

ಈ ಸಂದರ್ಭ ಜಿಲ್ಲಾಧ್ಯಕ್ಷ ಶಿವಕುಮಾರಸ್ವಾಮಿ, ಪರಿಶಿಷ್ಟ ಜಾತಿ ವಿಭಾಗದ ನಗರಾಧ್ಯಕ್ಷ ಆರ್ಟಿಸ್ಟ್ ಎಸ್.ನಾಗರಾಜು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. (ಎಸ್.ಎಚ್)

Leave a Reply

comments

Related Articles

error: