ಮೈಸೂರು

ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ “ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ತಡೆ ” ಅರಿವು ಕಾರ್ಯಾಗಾರ

ಮೈಸೂರು,ಡಿ.21:- ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ಮೈಸೂರು ನಗರ ಪೊಲೀಸ್ ಇಲಾಖೆ ವತಿಯಿಂದ ಕೃಷ್ಣರಾಜ ವಿಭಾಗ ಕಛೇರಿಯಲ್ಲಿ “ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ತಡೆ” ಅರಿವು ಕಾರ್ಯಕ್ರಮವನ್ನು ಇತ್ತೀಚೆಗೆ ಕೃಷ್ಣರಾಜ ವಿಭಾಗ ಹಾಗೂ ಕೃಷ್ಣರಾಜ ವಿಭಾಗದ ವ್ಯಾಪ್ತಿಯ ಕೃಷ್ಣರಾಜ ಪೊಲೀಸ್ ಠಾಣೆ, ಲಕ್ಷ್ಮೀಪುರಂ ಪೊಲೀಸ್ ಠಾಣೆ, ಅಶೋಕಪುರಂ ಪೊಲೀಸ್ ಠಾಣೆ, ವಿದ್ಯಾರಣ್ಯ ಪುರಂ ಪೊಲೀಸ ಠಾಣೆ, ಸರಸ್ವತಿಪುರಂ ಪೊಲೀಸ್ ಠಾಣೆ ಹಾಗೂ ಕುವೆಂಪು ನಗರ ಪೊಲೀಸ್ ಠಾಣೆಗಳ ಸಹಯೋಗದಲ್ಲಿ ಕೃಷ್ಣರಾಜ ಉಪ ವಿಭಾಗದ ವ್ಯಾಪ್ತಿಯ ಪೊಲೀಸ್ ಠಾಣೆಗಳ ಠಾಣೆಗಳ ಮಕ್ಕಳ ರಕ್ಷಣಾಧಿಕಾರಿಗಳು, ಸಹಾಯಕ ಮಕ್ಕಳ ರಕ್ಷಣಾಧಿಕಾರಿಗಳು, ಹಾಗೂ ತನಿಖಾ ಸಹಾಯಕರುಗಳಿಗೆ ಒಂದು ದಿನದ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ಮೇಲೆ ನಡೆವು ದೌರ್ಜನ್ಯ ಪ್ರಕರಣಗಳ ತನಿಖೆಯನ್ನು ನಡೆಸುವ ಬಗ್ಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣದ ಬಗ್ಗೆ, ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಮತ್ತು ಮಾನವ ಕಳ್ಳಸಾಗಾಣಿಕೆ ತಡೆಗಟ್ಟುವ ಬಗ್ಗೆ, ಬಾಲ್ಯ ವಿವಾಹ ತಡೆಗಟ್ಟುವ ಬಗ್ಗೆ, ಬಾಲ ಕಾರ್ಮಿಕ ತಡೆಗಟ್ಟುವ ಬಗ್ಗೆ, ಮಹಿಳೆಯರ ಮೇಲೆ ನಡೆಯುವ ಕೌಟುಂಬಿಕ ದೌರ್ಜನ್ಯದ ಸೂಕ್ತ ಅರಿವು ಕಾರ್ಯದ ಬಗ್ಗೆ ತಿಳುವಳಿಕೆ ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕೃಷ್ಣರಾಜ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಪೂರ್ಣಚಂದ್ರ ತೇಜಸ್ವಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಳ್ಳಸಾಗಾಣಿಕೆ ತಡೆಗಟ್ಟುವ ಪೊಲೀಸ್ ನಿರೀಕ್ಷಕರಾದ ಲೋಲಾಕ್ಷಿ ಪಿಎಸ್ ಐ .ಭವ್ಯ. ಸಂಪನ್ಯೂಲ ವ್ಯಕ್ತಿ ಪಿ ಪ್ರಸನ್ನ ಕುಮಾರ್ ಕೃಷ್ಣರಾಜ ವಿಭಾಗದ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಯ ಠಾಣಾ ಮಕ್ಕಳ ರಕ್ಷಣಾಧಿಕಾರಿಗಳು, ಸಹಾಯಕ ಮಕ್ಕಳ ರಕ್ಷಣಾಧಿಕಾರಿಗಳು, ಹಾಗೂ ತನಿಖಾ ಸಹಾಯಕರು ಹಾಗೂ ಇತರೆ ಸಿಬ್ಬಂದಿಯವರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: