ದೇಶಪ್ರಮುಖ ಸುದ್ದಿ

ಪ.ಬಂಗಾಳದಲ್ಲಿ ಬಿಜೆಪಿಗೆ ಹೊಡೆತ : ಸಂಸದ, ಯುವ ಮೋರ್ಚಾ ಅಧ್ಯಕ್ಷನ ಪತ್ನಿ ಟಿಎಂಸಿಗೆ ಸೇರ್ಪಡೆ

ದೇಶ(ಕೋಲ್ಕತ್ತಾ)ಡಿ.21:- ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಕುರಿತಾಗಿ ಭಾರೀ ತಯಾರಿಗಳು ನಡೆಯುತ್ತಿವೆ. ಪಕ್ಷದಿಂದ ಪಕ್ಷಕ್ಕೆ ಜಿಗಿಯುವ ಕಾರ್ಯಕ್ರಮವೂ ನಡೆದೇ ಇದೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಭೇಟಿಯ ವೇಳೆ ಟಿಎಂಸಿಯಲ್ಲಿ ಗುರುತಿಸಿಕೊಂಡಿದ್ದ ಶುಭೇದು ಅಧಿಕಾರಿ ಬಿಜೆಪಿಗೆ ಸೇರಿದ್ದಾರೆ. ಆದರೆ ಈಗ ಬಿಜೆಪಿಗೆ ಹಿನ್ನಡೆಯಾಗಿದೆ. ಬಂಗಾಳದ ಬಿಜೆಪಿ ಸಂಸದ ಸೌಮಿತ್ರ ಖಾನ್ ಅವರ ಪತ್ನಿ ಸುಜಾತಾ ಮಂಡಲ್ ಖಾನ್ ಬಿಜೆಪಿ ತೊರೆದು ಟಿಎಂಸಿಗೆ ಸೇರಿದ್ದಾರೆ. ಸೌಮಿತ್ರ ಖಾನ್ ಬಂಗಾಳದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರೂ ಆಗಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: