ದೇಶಪ್ರಮುಖ ಸುದ್ದಿ

ಕಾಂಗ್ರೆಸ್‌ನ ಹಿರಿಯ ಮುಖಂಡ ಮೋತಿಲಾಲ್‌ ವೊರಾ ನಿಧನ : ಗಣ್ಯರ ಸಂತಾಪ

ದೇಶ(ನವದೆಹಲಿ)ಡಿ.21:- ಕಾಂಗ್ರೆಸ್‌ನ ಹಿರಿಯ ಮುಖಂಡ ಮೋತಿಲಾಲ್‌ ವೊರಾ ಸೋಮವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.
ಅವರಿಗೆ 93ವರ್ಷ ವಯಸ್ಸಾಗಿತ್ತು.

ಮೂತ್ರ ಹಾಗೂ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ವೊರಾ ಅವರನ್ನು ಕೆಲ ದಿನಗಳ ಹಿಂದೆ ವೊಖ್ಲಾದಲ್ಲಿರುವ ಎಸ್ಕಾರ್ಟ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್‌ ನೆರವಿನೊಂದಿಗೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ.

ಸೋಮವಾರ ರಾತ್ರಿ ಇಲ್ಲವೇ ಮಂಗಳವಾರ ಬೆಳಿಗ್ಗೆ ಅವರ ಮೃತದೇಹವನ್ನು ಚಂಡೀಗಡಕ್ಕೆ ಕೊಂಡೊಯ್ದು ಅಲ್ಲೇ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬದವರು ಹೇಳಿದ್ದಾರೆ.
ವೊರಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: