ಮೈಸೂರು

ಮೊದಲ ಹಂತದ ಚುನಾವಣೆ : ಮತದಾನ ಪ್ರಕ್ರಿಯೆ ಆರಂಭ

ಮೈಸೂರು,ಡಿ.22:- ಗ್ರಾಮ ಪಂಚಾಯತ್ ಗೆ ಮೊದಲ ಹಂತದಲ್ಲಿ ನಡೆಯಲಿರುವ ಚುನಾವಣೆಗೆ ಮೈಸೂರು ಜಿಲ್ಲೆಯ ಐದು ತಾಲೂಕುಗಳಲ್ಲಿ ಮತದಾನ ಆರಂಭವಾಗಿದೆ.

ಮೊದಲನೇ ಹಂತದಲ್ಲಿ ಹುಣಸೂರು, ಕೆ.ಆರ್.ನಗರ, ಪಿರಿಯಾಪಟ್ಟಣ, ಹೆಚ್.ಡಿ. ಕೋಟೆ ಮತ್ತು ಸರಗೂರು ತಾಲೂಕುಗಳ ಒಟ್ಟು 148 ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಯುತ್ತಿದೆ. ಒಟ್ಟು 949 ಕ್ಷೇತ್ರಗಳಲ್ಲಿ, 2180 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, 125 ಸದಸ್ಯರು ಈಗಾಗಲೇ ಅವಿರೋಧ ಆಯ್ಕೆಯಾಗಿದ್ದಾರೆ.
6 ವಾರ್ಡ್ಗಳಿಗೆ ನಾಮಪತ್ರ ಸಲ್ಲಿಕೆ ಆಗಿಲ್ಲ. ಒಟ್ಟು 6,165 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಮತಗಟ್ಟೆ ಅಧಿಕಾರಿ ಸೇರಿದಂತೆ ಒಟ್ಟು 5,052 ಸಿಬ್ಬಂದಿಯನ್ನು ಚುನಾವಣಾ ಆಯೋಗ ನೇಮಿಸಿದೆ.
ಮತಗಟ್ಟೆ ಸಿಬ್ಬಂದಿ ಕಳುಹಿಸಲು ಹಾಗೂ ಕರೆತರಲು 176 ಕೆಎಸ್ಆರ್ಟಿಸಿ ಬಸ್, 17.ಮಿನಿ ಬಸ್, 7 ಜೀಪ್ ಬಳಕೆ ಮಾಡಲಾಗುತ್ತಿದೆ. ಕೋವಿಡ್ ಹಿನ್ನೆಲೆಯಲ್ಲಿ ಚುನಾವಣೆ ಆಯೋಗ ಸೂಚನೆಯಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಮತಗಟ್ಟೆ ಅಧಿಕಾರಿಗಳು ಹಾಗೂ ಪೋಲಿಂಗ್ ಏಜೆಂಟರು, ಫೇಸ್ ಶೀಲ್ಡ್, ಮಾಸ್ಕ್ ಮತ್ತು ಹ್ಯಾಂಡ್ ಗ್ಲೌಸ್ ಧರಿಸುವುದು ಕಡ್ಡಾಯವಾಗಿದೆ. ಮತದಾರರು ಮತಚಲಾಯಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಿರಬೇಕು. ಪ್ರತಿ ಮತಗಟ್ಟೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನೇಮಕ ಮಾಡಲಾಗಿದೆ.
ಮತಗಟ್ಟೆ ಸಿಬ್ಬಂದಿ, ಮತದಾರರಿಗೆ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಬಳಕೆ ಮಾಡಲಾಗುತ್ತಿದೆ. ಕೋವಿಡ್ ಲಕ್ಷಣ ಕಂಡು ಬಂದವರಿಗೆ ತಕ್ಷಣ ಆರೋಗ್ಯ ಕೇಂದ್ರಕ್ಕೆ ತಪಾಸಣೆಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ. ಬೆಳಿಗ್ಗೆ 8ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 6ಗಂಟೆಯವರೆಗೆ ಮತದಾನ ನಡೆಯಲಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: