ದೇಶಪ್ರಮುಖ ಸುದ್ದಿ

ದೇಶದಲ್ಲಿ 6 ತಿಂಗಳ ನಂತರ 20 ಸಾವಿರಕ್ಕಿಂತ ಕಡಿಮೆ ಕೊರೋನಾ ಸೋಂಕು ಪತ್ತೆ

ದೇಶ(ನವದೆಹಲಿ)ಡಿ.22:- ದೇಶದಲ್ಲಿನ ಕೊರೋನಾ ವೈರಸ್ ಪ್ರಕರಣಗಳಲ್ಲಿ ಕುಸಿತ ಕಂಡುಬಂದಿದೆ. ಕೊರೋನಾ ವೈರಸ್ ನ ಹೊಸ ಪ್ರಕರಣಗಳಲ್ಲಿ ಇಳಿಕೆ ಕಂಡುಬಂದಿದ್ದು, ಕೊರೋನಾ ವೈರಸ್ ಪ್ರಕರಣಗಳು 20 ಸಾವಿರಕ್ಕಿಂತ ಕಡಿಮೆ ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ, 19,556 ಹೊಸ ಕೊರೋನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಕಳೆದ 6 ತಿಂಗಳಲ್ಲಿ ಇದೇ ಮೊದಲ ಬಾರಿಗೆ ಕೊರೋನಾ ವೈರಸ್ ರೋಗಿಗಳ ಸಂಖ್ಯೆ 20 ಸಾವಿರಕ್ಕಿಂತ ಕಡಿಮೆ ಪತ್ತೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 19556 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ದೇಶದಲ್ಲಿ ಈವರೆಗೆ ಒಟ್ಟು 10075116 ಕೊರೋನಾ ವೈರಸ್ ಸೋಂಕಿತರು ಪತ್ತೆಯಾಗಿದ್ದಾರೆ. ಅದೇ ವೇಳೆ ದೇಶದಲ್ಲಿ ಕೊರೋನಾ ವೈರಸ್ ನ ಸಕ್ರಿಯ ರೋಗಿಗಳ ಸಂಖ್ಯೆಯೂ ಮೂರು ಲಕ್ಷಕ್ಕೆ ಇಳಿದಿದೆ. ದೇಶದಲ್ಲಿ ಕೊರೋನಾ ವೈರಸ್ನ ಸಕ್ರಿಯ ರೋಗಿಗಳ ಸಂಖ್ಯೆಯಲ್ಲಿ ಕ್ರಮೇಣ ಇಳಿಕೆ ಕಂಡುಬಂದಿದೆ. ದೇಶದಲ್ಲಿ ಸಕ್ರಿಯ ಕೊರೋನಾ ವೈರಸ್ ರೋಗಿಗಳ ಸಂಖ್ಯೆ 2,92,518 ಆಗಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 30,376 ಕೊರೋನಾ ವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ 9636487 ಕೊರೋನಾ ವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಕೊರೋನಾ ವೈರಸ್ನಿಂದ 301 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಇದುವರೆಗೆ ಕೊರೋನಾ ವೈರಸ್ನಿಂದ 146111 ಮಂದಿ ಸಾವನ್ನಪ್ಪಿದ್ದಾರೆ.
ದೇಶದಲ್ಲಿ ಕೊರೋನಾ ವೈರಸ್ ನ ಚೇತರಿಕೆಯ ದರದಲ್ಲಿ ನಿರಂತರ ಸುಧಾರಣೆ ಕಂಡುಬಂದಿದೆ. ದೇಶದಲ್ಲಿ ಕೊರೋನಾ ಚೇತರಿಕೆ ಪ್ರಮಾಣವು ಶೇಕಡಾ 95.64 ಕ್ಕೆ ತಲುಪಿದೆ. ಅದೇ ವೇಳೆ ಕೊರೋನಾ ವೈರಸ್ ನಿಂದ ಸಂಭವಿಸಿದ ಸಾವಿನ ಪ್ರಮಾಣವು ಶೇಕಡಾ 1.45 ರಷ್ಟಿದೆ. ಈವರೆಗೆ ದೇಶದಲ್ಲಿ 16,31,70,557 ಕೊರೋನಾ ಮಾದರಿ ಪರೀಕ್ಷೆಗಳನ್ನು ನಡೆಸಲಾಗಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: