
ದೇಶಪ್ರಮುಖ ಸುದ್ದಿ
ಡಿ. 24 : ರಾಷ್ಟ್ರಪತಿಯವರನ್ನು ಭೇಟಿ ಮಾಡಲಿರುವ ರಾಹುಲ್ ಗಾಂಧಿ : ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ 2 ಕೋಟಿ ಸಹಿ ಹಸ್ತಾಂತರ
ದೇಶ(ನವದೆಹಲಿ)ಡಿ.23:- ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುತ್ತಮುತ್ತಲಿನಲ್ಲಿ ಸಾವಿರಾರು ರೈತರು ನಡೆಸುತ್ತಿರುವ ಪ್ರತಿಭಟನೆ 28ನೇ ದಿನಕ್ಕೆ ಕಾಲಿರಿಸಿದೆ.
ಎಲ್ಲಾ ಮೂರು ಹೊಸ ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ರೈತ ಸಂಘಟನೆಗಳು ಒತ್ತಾಯಿಸಿದ್ದು ತಮ್ಮ ಒತ್ತಾಯಕ್ಕೆ ಅಚಲವಾಗಿವೆ. ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗ ಡಿಸೆಂಬರ್ 24 ರಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಲಿದೆ. ಇದೇ ವೇಳೆ ರಾಹುಲ್ ಗಾಂಧಿ ನೇತೃತ್ವದ ನಿಯೋಗದ ಪರವಾಗಿ ಕೃಷಿ ಕಾನೂನುಗಳ ವಿರುದ್ಧ ಸಂಗ್ರಹಿಸಲಾದ 2 ಕೋಟಿ ಜನರ ಸಹಿಯನ್ನು ರಾಷ್ಟ್ರಪತಿಗೆ ಹಸ್ತಾಂತರಿಸಲಿದ್ದಾರೆ.
ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಕೋರಿ ಸಹಿಯನ್ನು ದೇಶಾದ್ಯಂತ ಸಂಗ್ರಹಿಸಲಾಗಿದೆ. ಇದನ್ನು ಡಿಸೆಂಬರ್ 24 ರಂದು ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗ ರಾಷ್ಟ್ರಪತಿಗೆ ಹಸ್ತಾಂತರಿಸಲಿದೆ ಎಂದು ಕಾಂಗ್ರೆಸ್ ಮುಖಂಡ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ. (ಏಜೆನ್ಸೀಸ್,ಎಸ್.ಎಚ್)