ಸುದ್ದಿ ಸಂಕ್ಷಿಪ್ತ

ಸಂವಾದ ಕಾರ್ಯಕ್ರಮ: ಏ.15 ರಂದು

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಕಾನೂನು ಸಂಶೋಧನೆ ಹಾಗೂ ಅಧ್ಯಯನ ಕೇಂದ್ರ ಮೈಸೂರು ಇವರ ವತಿಯಿಂದ ಏಪ್ರಿಲ್ 15 ರಂದು ಕಲಾಮಂದಿರದ ಮನೆಯಂಗಳದಲ್ಲಿ ‘ಅಂತರ್ಜಲ ಸಂರಕ್ಷಿಸಲು ಮಾರ್ಗೋಪಾಯಗಳು’ ಕುರಿತಾದ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮೊಹಮ್ಮದ್ ಮುಜೀರುಲ್ಲಾ ಸಿ.ಜಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಕಾನೂನು ಸಂಶೋಧನ ಹಾಗೂ ಅಧ್ಯಯನ ಕೇಂದ್ರದ ಅಧ್ಯಕ್ಷ ಮತ್ತು ಹಿರಿಯ ವಕೀಲ ಅ.ಮ ಭಾಸ್ಕರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.  ಅಂತರ್ಜಲ ಸಂರಕ್ಷಣಾ ಅಭಿವೃದ್ಧಿ ಸಲಹೆಗಾರ  ಕೆ.ಆರ್ ಸುರೇಶ್,  ಸಾರ್ವಜನಿಕ ಸಂಪರ್ಕ ಇಲಾಖೆಯ  ಸಹಾಯಕ ನಿರ್ದೇಶಕ ಆರ್.ರಾಜು,  ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮೈಸೂರು ಗ್ರಾಮಾಂತರ ಪರಿಸರ ಅಧಿಕಾರಿ ಎಂ.ಜಿ ಯತೀಶ್ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಕಾನೂನು ಸಂಶೋಧನೆ ಹಾಗೂ ಅಧ್ಯಯನ ಕೇಂದ್ರ ಮೈಸೂರು ಕಾರ್ಯದರ್ಶಿ  ಶ್ರೀಕಾಂತ ಭಟ್  ಉಪಸ್ಥಿತರಿರುತ್ತಾರೆ. (ಎಲ್.ಜಿ)

Leave a Reply

comments

Related Articles

error: