ಕರ್ನಾಟಕಪ್ರಮುಖ ಸುದ್ದಿ

ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಗೆ ಕೋವಿಡ್ ಸೋಂಕು

ರಾಜ್ಯ( ಬೆಂಗಳೂರು)ಡಿ.23:- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಅವರಲ್ಲಿ ಕೋವಿಡ್‌ ಸೋಂಕು ದೃಢಪಟ್ಟಿದೆ.
ಆಯುಕ್ತರು ನಿತ್ಯವೂ ಅನೇಕ ಸಭೆ ಸಮಾರಂಭಗಳಲ್ಲಿ ಅವರು ಭಾಗವಹಿಸುತ್ತಿರುತ್ತಾರೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು ಕೂಡಾ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳುವಂತೆ ಪಾಲಿಕೆ ಸಾರ್ವಜನಿಕರಲ್ಲಿ ಕೋರಿದೆ.
ಮಂಜುನಾಥ ಪ್ರಸಾದ್‌ ಅವರಿಗೆ ಸೋಮವಾರ ಅಲ್ಪ ಪ್ರಮಾಣದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹಾಗಾಗಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡಿದ್ದರು. ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿತ್ತು. ಮಲ್ಲಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾಸದಲ್ಲಿದ್ದೇನೆ ಎಂದು ಮಂಜುನಾಥ್‌ ಪ್ರಸಾದ್‌ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: