ಮೈಸೂರು

ಡಾ.ಬಿ.ಆರ್.ಅಂಬೇಡ್ಕರ್ ಕೊಡುಗೆ ಇಂದಿಗೂ ಜೀವಂತ : ದ್ಯಾವಪ್ಪನಾಯಕ

ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ರವರ 126 ನೇ ಜಯಂತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮೈಸೂರು ಜಗನ್ಮೋಹನ ಅರಮನೆಯ ಎದುರು ಇರುವ ಕಚೇರಿಯಲ್ಲಿ ಮಾನಸಗಂಗೋತ್ರಿಯ ಸಹಾಯಕ ಪ್ರಾಧ್ಯಾಪಕ ಡಾ.ಹೆಚ್. ಪಿ. ಜ್ಯೋತಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ರಾಜ್ಯಾಧ್ಯಕ್ಷ ದ್ಯಾವಪ್ಪನಾಯಕ ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್ ದಲಿತ, ಹಿಂದುಳಿದ, ಹಾಗೂ ಅಲ್ಪಸಂಖ್ಯಾತರ ಏಳಿಗೆಗಾಗಿ ಶ್ರಮಿಸಿದವರು. ಸಂವಿಧಾನ ರಚನೆ ಮಾಡಿದ ಹರಿಕಾರ. ಡಾ.ಬಿ.ಆರ್.ಅಂಬೇಡ್ಕರ್ ನೀಡಿದ ಕೊಡುಗೆ ಇಂದಿಗೂ ಜೀವಂತವಾಗಿದೆ. ದಿನದಂದು ಮಾತ್ರ ಅವರನ್ನು ನೆನೆಯದೇ ಎಲ್ಲ ದಿನಗಳಲ್ಲೂ ಸ್ಮರಿಸಬೇಕು. ದೇಶದ ಎಲ್ಲಾ ಕಚೇರಿಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಇವರ ಭಾವ ಚಿತ್ರ ಇಟ್ಟು ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕೆಂದು ತಿಳಿಸಿದರು.

ಇದೇ ಸಂದರ್ಭ ಡಾ.ಹೆಚ್.ಪಿ.ಜ್ಯೋತಿ ಹಾಗೂ ಚೆನ್ನಕೇಶವ ಅವರನ್ನು ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮಹರ್ಷಿ ಜನಸೇವಾ ಟ್ರಸ್ಟ್ ಅಧ್ಯಕ್ಷ ಪಿ.ದೇವರಾಜು, ಪ್ರಭಾಕರ್ ಹುಣಸೂರು, ಸುರೇಶ್ ಕುಮಾರ್ ಬೀಡು ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: