ಮೈಸೂರು

ರಾತ್ರಿ ಮಾತ್ರ ಎಚ್ಚರವಾಗಿರೋಕೆ ಅದೇನು ಕೊರೋನಾನಾ ಇಲ್ಲ ಗೂಬೇನಾ : ಡಾ.ಹೆಚ್.ಸಿ.ಮಹದೇವಪ್ಪ ವ್ಯಂಗ್ಯ


ಮೈಸೂರು,ಡಿ.24:- ರಾತ್ರಿ ಮಾತ್ರ ಎಚ್ಚರವಾಗಿರೋಕೆ ಅದೇನು ಕೊರೋನಾನಾ ಇಲ್ಲ ಗೂಬೇನಾ ಎಂದು ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ವ್ಯಂಗ್ಯವಾಡಿದ್ದಾರೆ.
ಇಂದಿನಿಂದ ರಾತ್ರಿ 11ರಿಂದ ಬೆಳಿಗ್ಗೆ 6ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಿದ ಹಿನ್ನೆಲೆಯಲ್ಲಿ ಟ್ವೀಟ್ ನಲ್ಲಿ ವ್ಯಂಗ್ಯವಾಡಿರುವ ಮಾಜಿ ಸಚಿವರು ರಾಜ್ಯ ಬಿಜೆಪಿ ಸರ್ಕಾರದ ತರ್ಕ ರಹಿತವಾದ ರಾತ್ರಿ ಕರ್ಫ್ಯೂ ಆದೇಶವನ್ನು ಕಂಡ ನಂತರ ರಾತ್ರಿ ಮಾತ್ರ ಎಚ್ಚರವಾಗಿರೋಕೆ ಅದೇನು ಕೊರೋನಾನಾ ಇಲ್ಲ ಗೂಬೇನಾ ಎಂಬ ಅನುಮಾನ ನನ್ನ ಕಾಡತೊಡಗಿದ್ದು ಈ ಮಾತು ಹಾಸದಯವಾಗಿ ಕಂಡರೂ ನನ್ನಲ್ಲಿ ದಿಗಿಲು ಹುಟ್ಟಿಸಿದೆ ಎಂದು ವ್ಯಂಗ್ಯವಾಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: