ಕರ್ನಾಟಕಪ್ರಮುಖ ಸುದ್ದಿಮೈಸೂರು

ಕೋಟ್ಯಂತರ ಜನರ ಭಾವನೆಗೆ ಧಕ್ಕೆ ಬರುವಂತೆ ಮಾತನಾಡಬೇಡಿ : ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಪ್ರತಾಪ್ ಸಿಂಹ ಸಲಹೆ

ಮೈಸೂರು,ಡಿ.25:- ಕೊಡವರು ಗೋಮಾಂಸ ತಿನ್ನುತ್ತಾರೆ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.
ಮೈಸೂರಿನಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ನಿಮ್ಮ ಅಕ್ಕ ಪಕ್ಕದಲ್ಲಿರುವ ಕೊಡವರು ಗೋಮಾಂಸ ತಿನ್ನಬಹುದು. ಆದರೆ ಅವರ ಕಾರಣಕ್ಕೆ ಇಡೀ ಕೊಡವರನ್ನು ಗೋಮಾಂಸ ತಿನ್ನುತ್ತಾರೆ ಎಂದರೆ ಹೇಗೆ.? ನೀವು ಗೋಮಾಂಸ ತಿನ್ನುತ್ತೀರಿ ಅಂತ ಇಡೀ ಕುರುಬ ಸಮಾಜ ಬೀಫ್ ತಿಂತಾರೆ ಅನ್ನೋಕೆ ಆಗುತ್ತಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಪ್ರಶ್ನಿಸಿದರು.
ಸಿದ್ದರಾಮಯ್ಯ ವಿವೇಚನೆ ಇಲ್ಲದೆ ಯಾಕೇ ಮಾತನಾಡಿದ್ದಾರೆ ಅನ್ನೋದೆ ನನಗೆ ಅರ್ಥ ಆಗಿಲ್ಲ. ಆತ್ಮದ್ರೋಹದ ಮಾತುಗಳನ್ನು ಕಾಂಗ್ರೆಸ್ ನವರು ಮಾತ್ರ ಮಾತನಾಡೋಕೆ ಸಾಧ್ಯ. ಕೊಡವರ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಗೋಮಾತೆಯನ್ನು ಎರಡನೇ ತಾಯಿಯಾಗಿ ನೋಡುತ್ತಾರೆ. ಕೋಟ್ಯಂತರ ಜನರ ಭಾವನೆಗೆ ಧಕ್ಕೆ ಬರುವಂತೆ ಮಾತನಾಡಬೇಡಿ. ನಿಮ್ಮ ತಪ್ಪಿನ ಅರಿವಾಗಿ ಅದನ್ನುತಪ್ಪಾಗಿ ಅರ್ಥೈಸಲಾಗಿದೆ ಅಂತ ಹೇಳಿದ್ದೀರಿ. ಆದರೆ ಇನ್ನು ಮುಂದೆ ಕೊಡವರಿಗೆ ನೋವಾಗುವಂತೆ ಮಾತನಾಡಬೇಡಿ ಎಂದು ಸಲಹೆ ನೀಡಿದರು.
ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ
ಕಳೆದ ಮಾರ್ಚ್ನಿಂದಲೂ ಜನರು ನಿರ್ಬಂಧದ ವ್ಯವಸ್ಥೆಯಲ್ಲೆ ಇದ್ದಾರೆ. ಜನರನ್ನು ಇನ್ನೆಷ್ಟು ದಿನ ಮನೆಯಲ್ಲಿ ಕೂರಿಸುತ್ತೀರಾ? ಇನ್ನಾದರೂ ಜನರು ಓಡಾಡಲು ಬಿಡಿ. ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ ಎಂದು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದರು. ನಾನು ದೆಹಲಿ ಸೇರಿದಂತೆ ಹಲವು ಪ್ರದೇಶಗಳಿಗೆ ಹೋಗಿ ಬಂದಿದ್ದೇನೆ. ಎಲ್ಲಾ ಕಡೆ ಕೊರೋನಾ ರೂಪಾಂತರದ ಬಗ್ಗೆ ಚರ್ಚೆ ಇದೆ. ಆದರೆ ಜನರನ್ನು ಹೆಚ್ಚು ದಿನ ನಿರ್ಬಂಧ ಮಾಡೋಕೆ ಆಗಲ್ಲ. ಉದ್ಯಮ ಹಾಗೂ ಅವರ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಕೊಡಬೇಕು. ಮಾಸ್ಕ್ ಕಡ್ಡಾಯ ಮಾಡಿ. ಆದರೆ ಮಾಸ್ಕ್ ಹೆಸರಿನಲ್ಲಿ ಕಾರು, ಬೈಕ್ ನಿಲ್ಲಿಸಿ ಜನರಿಗೆ ತೊಂದರೆ ಕೊಡಬೇಡಿ ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: