ಕರ್ನಾಟಕಪ್ರಮುಖ ಸುದ್ದಿಮೈಸೂರು

ಅರ್ಕಾವತಿ ಡಿನೋಟಿಫಿಕೇಶನ್ ವಿಚಾರ ಹೊರಗೆ ಬಂದರೆ ನೀವೆಲ್ಲಿಗೆ ಹೋಗುತ್ತೀರಾ : ಮಾಜಿ ಸಿಎಂ ಸಿದ್ದರಾಮಯ್ಯಗೆ ಹೆಚ್.ವಿಶ್ವನಾಥ್ ಪ್ರಶ್ನೆ

ಮೈಸೂರು,ಡಿ.25:- ಡಿನೋಟಿಫಿಕೇಶನ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿದ ವಿಪಕ್ಷಗಳ ನಾಯಕರಿಗೆ ಬಿಜೆಪಿ ವಿಧಾನಪರಿಷತ್ ಸದಸ್ಯ ವಿಶ್ವನಾಥ್ ತಿರುಗೇಟು ನೀಡಿದರು.
ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಡಿನೋಟಿಫಿಕೇಶನ್ ವಿಚಾರವಾಗಿ ಯಡಿಯೂರಪ್ಪ ಅವರು ಜೈಲಿಗೆ ಹೋಗಬೇಕು ಎನ್ನುತ್ತಿದ್ದೀರಿ. ನೀವು ಮಾಡಿರುವುದನ್ನು ಹೊರಗಡೆ ತನ್ನಿ. ಅರ್ಕಾವತಿ ಡಿನೋಟಿಫಿಕೇಶನ್ ವಿಚಾರ ಹೊರಗೆ ಬಂದರೆ ನೀವೂ ಎಲ್ಲಿಗೆ ಹೋಗುತ್ತೀರಾ ಅಂತ ಗೊತ್ತಾಗುತ್ತೆ ಎಂದು ವಿಪಕ್ಷಗಳಿಗೆ ಟಾಂಗ್ ನೀಡಿದರು.
ರಾಜಕೀಯ ಎಂದ ಮೇಲೆ ಆರೋಪ ಪ್ರತ್ಯಾರೋಪಗಳು ಸಹಜ. ಆದರೆ ವಸ್ತುಸ್ಥಿತಿಯೇ ಬೇರೆ ಇರುತ್ತದೆ. ರಾಜಕೀಯ ರಾಡಿಯ ಹಿಂದೆ ಮಾತನಾಡಬಾರದು. ಇವರು ಜೈಲಿಗೆ ಹೋಗಿದ್ದರು, ಅವರು ಜೈಲಿಗೆ ಹೋಗಿದ್ದರು ಅನ್ನುವ ಮಾತುಗಳೆಲ್ಲಾ ದೊಡ್ಡವರ ಬಾಯಲ್ಲಿ ಬರಬಾರದು. ಜವಾಬ್ದಾರಿಯುತ ರಾಜಕೀಯ ನಾಯಕರು ಶಾಂತಿಯ ವಾತಾವರಣ ನಿರ್ಮಾಣ ಮಾಡಬೇಕು. ಮಾನಸಿಕ ನೆಮ್ಮದಿ ಕದಡುವ ಮಾತುಗಳು ಯಾರಿಂದಲೂ ಬರಬಾರದು ಎಂದು ಸಲಹೆ ನೀಡಿದರು.
ಡಿನೋಟಿಫಿಕೇಶನ್ ವಿಚಾರವಾಗಿ ಯಡಿಯೂರಪ್ಪನವರು ಜೈಲಿಗೆ ಹೋಗಬೇಕು ಎನ್ನುತ್ತೀದ್ದೀರಿ. ನೀವು ಮಾಡಿರುವುದನ್ನು ಹೊರಗಡೆ ತನ್ನಿ. ಅರ್ಕಾವತಿ ಡಿನೋಟಿಫಿಕೇಶನ್ ವಿಚಾರ ಹೊರಗೆ ಬಂದರೆ ನೀವೂ ಎಲ್ಲಿಗೆ ಹೋಗುತ್ತೀರಿ ಅಂತ ಗೊತ್ತಾಗುತ್ತೆ ಎಂದು ಸಿಎಂ ಬಿಎಸ್ ವೈ ರಾಜೀನಾಮೆಗೆ ಆಗ್ರಹಿಸಿದ ವಿರೋಧ ಪಕ್ಷಗಳಿಗೆ ಹೆಚ್. ವಿಶ್ವನಾಥ್ ತಿರುಗೇಟು ನೀಡಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: