Uncategorized

ಎಂಎನ್‌ಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಜೆಪಿಗೆ ಸೇರ್ಪಡೆ: ನಟ ಕಮಲ್ ಹಾಸನ್ ಗೆ ಹಿನ್ನಡೆ

ಚೆನ್ನೈ,ಡಿ.26- ಮಕ್ಕಳ್ ನೀಧಿ ಮಯ್ಯಂ (ಎಂಎನ್‌ಎಂ) ಪಕ್ಷದ ಪ್ರಧಾನ ಕಾರ್ಯದರ್ಶಿ ಎ.ಅರುಣಾಚಲಂ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದರಿಂದ ಪಕ್ಷದ ಸಂಸ್ಥಾಪಕ, ನಟ ಕಮಲ್ ಹಾಸನ್ ಗೆ 2021ರ ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ಹಿನ್ನಡೆಯಾಗಿದೆ.

ಅರುಣಾಚಲಂ ಅವರು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅರುಣಾಚಲಂ ಅವರು ಟ್ಯುಟಿಕೋರಿನ್ ಜಿಲ್ಲೆಯವರಾಗಿದ್ದಾರೆ. ಕಮಲ್‌ ಹಾಸನ್‌ ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಚಾರ ನಡೆಸುತ್ತಿರುವ ಸಂದರ್ಭದಲ್ಲಿ ಅರುಣಾಚಲಂ ಪಕ್ಷ ತೊರೆದಿರುವುದು ಎಂಎನ್‌ಎಂಗೆ ಹಿನ್ನಡೆಯಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಸಚಿವ ಪ್ರಕಾಶ್ ಜಾವಡೇಕರ್ ಮಾತನಾಡಿ, ತಮಿಳುನಾಡಿನಲ್ಲಿ ಬಿಜೆಪಿ ಅದ್ಭುತ ಪ್ರದರ್ಶನ ನೀಡುತ್ತದೆ ಎಂದು ನನಗೆ ವಿಶ್ವಾಸವಿದೆ. ದೇಶದಾದ್ಯಂತ ಅನೇಕ ಪಕ್ಷಗಳು ಕುಟುಂಬ ಪಕ್ಷವನ್ನು ಹೊಂದಿವೆ. ಆದರೆ, ನಮಗೆ ನಮ್ಮ ಪಕ್ಷವೇ ಒಂದು ಕುಟುಂಬವಿದ್ದಂತೆ. ನಾವು ಚುನಾವಣೆಯಲ್ಲಿ ಸಾರ್ವತ್ರಿಕ ಪ್ರದರ್ಶನ ನೀಡುತ್ತೇವೆ ಎಂದು ತಿಳಿಸಿದ್ದಾರೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: