ಕರ್ನಾಟಕಪ್ರಮುಖ ಸುದ್ದಿಮೈಸೂರು

ಗ್ರಾ.ಪಂ ಚುನಾವಣೆಯಲ್ಲಿ ಹಕ್ಕು ಚಲಾಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು, ಡಿ.27:- ಗ್ರಾ.ಪಂ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಮತ ಚಲಾಯಿಸಿದರು.

ಸ್ವಗ್ರಾಮಕ್ಕೆ ಆಗಮಿಸಿದ ಮಾಜಿ ಸಿಎಂ ವರುಣಾ ಹೋಬಳಿಯ ಸಿದ್ದರಾಮಯ್ಯನಹುಂಡಿ ಗ್ರಾಮದಲ್ಲಿ ಮತದಾನ ಮಾಡಿದರು.
ಸಿದ್ದರಾಮಯ್ಯನಹುಂಡಿ ಸರ್ಕಾರಿ ಶಾಲೆ ಮತಗಟ್ಟೆ ಸಂಖ್ಯೆ 138ರಲ್ಲಿ‌ ಮತ ಚಲಾವಣೆ ಮಾಡಿದರು.ಮಾಸ್ಕ್, ಸ್ಯಾನಿಟೈಸರ್ ಬಳಸಿ ಮತದಾನ ಮಾಡಿದರು. ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆಯೇ ಬೆಂಬಲಿಗರು ಸುತ್ತುವರಿದರು. ಕರಪತ್ರ ನೀಡಿ ಮತ ಹಾಕುವಂತೆ ಮನವಿ ಮಾಡಿದರು.
ಬಳಿಕ ಮಾತನಾಡಿದ ಅವರು ಸಿಎಂ ಸ್ಥಾನಕ್ಕೆ ಖರ್ಗೆ ಹೆಸರು ತಿರಸ್ಕರಿಸಿದ್ದು ನಾನಂತು ಅಲ್ಲ. ಯಾರು ಖರ್ಗೆ ಹೆಸರು ತಿರಸ್ಕಾರ ಮಾಡಿದವರ ಹೆಸರು ಹೇಳಲಿ. ಖರ್ಗೆ ಸಿಎಂ ಆಗುವ ಅವಕಾಶ ಇತ್ತು ಎಂಬ ದೇವೇಗೌಡರ ಹೇಳಿಕೆ ತಿರುಗೇಟು ನೀಡಿದರು.

ನಾನಂತು ಖರ್ಗೆ ಹೆಸರು ತಿರಸ್ಕಾರ ಮಾಡಿಲ್ಲ. ಯಾರು ಮಾಡಿದ್ರು ಅಂತ ನನಗೆ ಗೊತ್ತಿಲ್ಲ. ಅವರಿಗೆ ಗೊತ್ತಿದ್ರೆ ಹೆಸರು ಹೇಳಲಿ ಎಂದು ಸವಾಲು ಹಾಕಿದರು.

ಜಾತಿ ಗಣತಿ ವರದಿ ಪಡೆಯಲು ಎಚ್‌ಡಿಕೆ ಅಡ್ಡಿ ಎಂಬ ಪುಟ್ಟರಂಗಶೆಟ್ಟಿ ಹೇಳಿಕೆ ಹಿನ್ನೆಲೆ ಪುಟ್ಟರಂಗಶೆಟ್ಟಿ ಸತ್ಯ ಹೇಳಿದ್ದಾರೆ. ವರದಿ ಸ್ವೀಕಾರ ಮಾಡದಂತೆ ಕುಮಾರಸ್ವಾಮಿ ಹೆದರಿಸಿದ್ದರು. ಕುಮಾರಸ್ವಾಮಿ ಯಾಕೆ‌ ವರದಿ ಪಡೆಯಲು ಹಿಂದೇಟು ಹಾಕಿದ್ದರು ನನಗೆ ಗೊತ್ತಿಲ್ಲ ಎಂದರು.

ಸಿದ್ದರಾಮಯ್ಯ ಪಕ್ಷ ಕಟ್ಟಿಲ್ಲ ಎಂಬ ದೇವೇಗೌಡರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ದೇವೇಗೌಡರು ಪಾಪ. ದೇವೇಗೌಡರ ಬಗ್ಗೆ ನಾನು ಪ್ರತಿಕ್ರಿಯೆ ನೀಡಬಾರದು ಅಂದುಕೊಂಡಿದ್ದೀನಿ. 1999ರಲ್ಲಿ ಜೆಡಿಎಸ್ ಅಧ್ಯಕ್ಷರಾಗಿದ್ದು ಯಾರು.? 6 ವರ್ಷಗಳ ಕಾಲ‌ ಜೆಡಿಎಸ್ ಅಧ್ಯಕ್ಷನಾಗಿದ್ದು ನಾನು.? ಹಾಗಾದರೆ ನಾನು ಅಧ್ಯಕ್ಷನಾಗಿದ್ದು ವ್ಯರ್ಥನಾ.? ಎಂದು ದೇವೇಗೌಡರಿಗೆ ಪ್ರಶ್ನೆ ಮಾಡಿದರು.
ಮತದಾನಕ್ಕೂ ಮುನ್ನ ಗ್ರಾಮ ದೇವರ ದರ್ಶನ ಮಾಡಿದರು. ಸಿದ್ದರಾಮೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಡಿ.29 ಕ್ಕೆ ಮೈಸೂರಿನಲ್ಲಿ ಕುರುಬರ ಎಸ್‌ಟಿ‌ ಮೀಸಲಾತಿ ಹೋರಾಟ ಹಿನ್ನೆಲೆ ಹೋರಾಟದ ಅವಶ್ಯಕತೆ ಇಲ್ಲ ಎಂದರು. ಇದು ಕುರುಬರನ್ನ ಇಬ್ಬಾಗ ಮಾಡುವ ಹುನ್ನಾರ. ನಾನು ಸಿಎಂ ಆಗಿದ್ದಾಗಲೇ
ಕುಲಶಾಸ್ತ್ರ ಅಧ್ಯಯನಕ್ಕೆ ಶಿಫಾರಸ್ಸು ಮಾಡಿದ್ದೆ. ಈಶ್ವರಪ್ಪ, ವಿಶ್ವನಾಥ್ ಇಬ್ಬರು ಬಿಜೆಪಿ ಸರ್ಕಾರದಲ್ಲಿದ್ದಾರೆ. ಅವರು ಕುಲಶಾಸ್ತ್ರ ಅಧ್ಯಯನ ವರದಿ ಪಡೆದು ಕೇಂದ್ರಕ್ಕೆ ಶಿಫಾರಸ್ಸು ಮಾಡಿಸಲಿ.
ಇದು ಕುರುಬರನ್ನ ಇಬ್ಬಾಗ ಮಾಡುವ ಆರ್‌ಎಸ್‌ಎಸ್‌ ಹುನ್ನಾರ ಎಂದು ಕಿಡಿಕಾರಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: