ಕರ್ನಾಟಕಪ್ರಮುಖ ಸುದ್ದಿ

ಯುಕೆ ಯಿಂದ ಬಂದಿರುವ 26 ಮಂದಿಗೆ ಕೊರೋನಾ ಪಾಸಿಟಿವ್ : ಸಚಿವ ಡಾ.ಕೆ.ಸುಧಾಕರ್

ರಾಜ್ಯ(ಬೆಂಗಳೂರು)ಡಿ.28:- ಯುಕೆ ಯಿಂದ ಬಂದಿರುವ 26 ಮಂದಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿದ್ದೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಸುಧಾಕರ್, ಕೊರೋನಾ ಪಾಸಿಟಿವ್ ಬಂದಿರುವವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯ ಉತ್ತಮವಾಗಿದೆ. ಎಲ್ಲರಲ್ಲೂ ಕೊರೋನಾ ಗುಣಲಕ್ಷಣಗಳು ಕಂಡು ಬಂದಿದೆ. ಯುಕೆಯಿಂದ ಬಂದವರು ಸಹಕರಿಸಬೇಕು. ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಶಾಲೆ ಆರಂಭ ಕುರಿತು ಇಂದು ಸಭೆ ಮಾಡುತ್ತೇವೆ. ಹೊಸ ವರ್ಷಕ್ಕೆ ಮಾರ್ಗಸೂಚಿ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸುತ್ತೇವೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: