
ಮೈಸೂರು
ನೋಟರಿ ಎಸ್.ಶ್ರೀನಿವಾಸಮೂರ್ತಿ ದಂಪತಿಗೆ ಸನ್ಮಾನ
ಮೈಸೂರು, ಡಿ.28:- ನಗರದ ಕೆ.ಆರ್.ಮೊಹಲ್ಲಾದ ತ್ಯಾಗರಾಜ ರಸ್ತೆಯಲ್ಲಿರುವ ಕಲ್ಯಾಣ ಭವನದಲ್ಲಿ ನಿನ್ನೆ ಆಯೋಜಿಸಿದ್ದ ಬ್ರಾಹ್ಮಣ ಧರ್ಮ ಸಹಾಯ ಸಭಾ ಶತಮಾನೋತ್ಸವದ ಸಮಾರೋಪ ಸಮಾರಂಭದಲ್ಲಿ ಖ್ಯಾತ ವಕೀಲ ಹಾಗೂ ನೋಟರಿ ಎಸ್.ಶ್ರೀನಿವಾಸಮೂರ್ತಿ ಹಾಗೂ ಅವರ ಧರ್ಮಪತ್ನಿ ಬಿ.ಎಸ್.ತಾರಾಬಾಯಿ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಈ ಸಂದರ್ಭ ಅರ್ಜುನ ಅವಧೂತ ಗುರೂಜಿ, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಎಸ್.ಸಚ್ಚಿದಾನಂದಮೂರ್ತಿ, ಅಧ್ಯಕ್ಷ ಎನ್.ಶ್ರೀನಿವಾಸ್, ಉಪಾಧ್ಯಕ್ಷ ಎಂ.ಮಂಜುನಾಥ್, ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ಪಾಲಿಕೆ ಸದಸ್ಯ ಬಿ.ವಿ.ಮಂಜುನಾಥ್, ಯುವ ಮುಖಂಡ ಅಜಯ್ ಶಾಸ್ತ್ರಿಯವರು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)