ಮೈಸೂರು

ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಡಿ.ಸಿ.ಉಮೇಶ್ಅವರಿಗೆ ಸನ್ಮಾನ

ಮೈಸೂರು,ಡಿ.28:- ಮೈಸೂರು ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ ವತಿಯಿಂದ ಶಾರದಾ ವಿಲಾಸ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಡಿ.ಸಿ.ಉಮೇಶ್ ಅವರನ್ನು ಸನ್ಮಾನಿಸಲಾಯಿತು.
ನಗರದ ಡಿ.ಬನುಮಯ್ಯ ಪದವಿಪೂರ್ವ ಕಾಲೇಜಿನ ಕಲಾಭವನದಲ್ಲಿ ಇಂದು ಮೈಸೂರು ಜಿಲ್ಲಾ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ ವತಿಯಿಂದ ಈ ಬಾರಿ ಮೈಸೂರು ವಿಶ್ವವಿದ್ಯಾನಿಲಯದಿಂದ ರಸಾಯನಶಾಸ್ತ್ರ ವಿಭಾಗದಲ್ಲಿ ಪಿಎಚ್.ಡಿ ಗಳಿಸಿದ ಶಾರದಾ ವಿಲಾಸ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ, ಯುವ ವಿಜ್ಞಾನಿ ಡಾ. ಡಿ.ಸಿ.ಉಮೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಗೀತಾ.ಜಿ.ಆರ್, ರಸಾಯನ ಶಾಸ್ತ್ರ ವೇದಿಕೆಯ ಅಧ್ಯಕ್ಷರಾದ ನಸೀಮುದ್ದೀನ್.ಎನ್.ಎ, ಪ್ರಾಚಾರ್ಯರಾದ ನಾಗಮಲ್ಲೇಶ್, ಡಿ.ಬನುಮಯ್ಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಬುಶ್ರಾಬೇಗಂ.ಎ ಮತ್ತಿತರರು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: