ಮೈಸೂರು

ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ಬ್ಯಾಂಕ್ ಗಳಲ್ಲಿ ಕನ್ನಡ ಬಳಕೆ ಕುರಿತು ಜಾಗೃತಿ

ಮೈಸೂರು,ಡಿ.29:- ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆದೇಶದಂತೆ ಇಂದು ಬೆಳಿಗ್ಗೆ ‘ಬ್ಯಾಂಕ್ ಗಳಲ್ಲಿ ಕನ್ನಡ ಬಳಕೆ’ ಕುರಿತಂತೆ ಮೈಸೂರು ಜಿಲ್ಲಾ ಲೀಡ್ ಬ್ಯಾಂಕ್ ಮುಂಭಾಗದಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಮೈಸೂರು ನಗರದ ಸರಸ್ವತಿಪುರಂ ನ ಸಾಹುಕಾರ್ ಚನ್ನಯ್ಯ ರಸ್ತೆಯಲ್ಲಿರುವ ಜಿಲ್ಲಾ ಲೀಡ್ ಬ್ಯಾಂಕ್ ಮುಂಭಾಗದಲ್ಲಿ ನಡೆದ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ರಾಜ್ಯ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಡಾ.ಗುಬ್ಬಿಗೂಡು ರಮೇಶ್, ಜಿಲ್ಲಾ ಕಸಾಪ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ, ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿಯ ಸದಸ್ಯರಾದ ಜೆ.ಬಿ.ರಂಗಸ್ವಾಮಿ, ಡಾ.ಎಂ.ಜಿ.ಅರಸ್, ಭೇರ್ಯ ರಾಜಕುಮಾರ್, ಡಾ.ವಿನೋದಮ್ಮ, ಮನಪಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಎ.ಎಸ್.ನಾಗರಾಜ್, ಸಾತನೂರು ದೇವರಾಜ್, ಅರವಿಂದ ಶರ್ಮ, ಸೌಗಂಧಿಕಾ ಜೋಯೀಸ್, ಎನ್.ಜಿ.ಗಿರೀಶ್, ಡಾ.ಮುಳ್ಳೂರು ನಂಜುಂಡಸ್ವಾಮಿ ಭಾಗವಹಿಸಿದ್ದರು.
ಕನ್ನಡ ಜಾಗೃತಿ ಕಾರ್ಯಕ್ರಮದ ಬಳಿಕ ಎಲ್ಲಾ ಸದಸ್ಯರು ಮೈಸೂರು ನಗರದ ಡಿ.ದೇವರಾಜ ಅರಸ್ ರಸ್ತೆಯಲ್ಲಿ ತೆರಳಿ ಕನ್ನಡ ಭಾಷೆಯ ನಾಮಫಲಕ ಅಳವಡಿಸುವಂತೆ ಅಲ್ಲಿನ ವಾಣಿಜ್ಯ ಮಳಿಗೆಗಳ ಮಾಲೀಕರಿಗೆ ಜಾಗೃತಿ ಮೂಡಿಸಿದರು.
ಬ್ಯಾಂಕ್ ಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಕನ್ನಡ ಜಾಗೃತಿ ಮೂಡಿಸುವ ಸಲುವಾಗಿ ಕನ್ನಡ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: