ಮೈಸೂರು

ಲಾಡ್ಜ್ ಮೇಲೆ ದಾಳಿ : ಏಳು ಮಂದಿ ಪೊಲೀಸ್ ವಶಕ್ಕೆ

ಬಲಮುರಿ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಶ್ರೀರಂಗಪಟ್ಟಣ ಠಾಣೆಯ ಪೊಲೀಸರು ಏಳುಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಶ್ರೀರಂಗಪಟ್ಟಣದ ಬಲಮುರಿಯಲ್ಲಿರುವ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಮಾಹಿತಿಯ ಆಧಾರದ ಮೇಲೆ  ಸಿಪಿಐ ಚಂದ್ರಶೇಖರ್ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ನಾಲ್ವರು ಪುರುಷರನ್ನು, ಮೂವರು ಮಹಿಳೆಯರನ್ನು ವಶಕ್ಕೆ ಪಡೆದಿದ್ದಾರೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: